ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಹಾಸನ: ಲಂಚದ ಆರೋಪದ ವಾಟ್ಸಾಪ್ ಚಾಟ್ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಹಾಗೂ ಸಚಿವ ಶಿವಲಿಂಗೇಗೌಡ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಕ್ಕೆ ಸಂಬಂಧಿಸಿದ ವಾಟ್ಸಾಪ್ ಚಾಟ್ ನಕಲಿ ಎಂದು ಡಿಸಿ ಸಹಾಯಕ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊ...

· ಹಾಸನ
ಮತ್ತೊಂದು ಹಂತ ತಲುಪಿದ ಹಾಸನ ಜಿಲ್ಲಾಧಿಕಾರಿ ಲತಾ- HD ಕುಮಾರಸ್ವಾಮಿ ನಡುವಿನ ವಾರ್
ಹಂಚಿಕೊಳ್ಳಿ:

ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಹಾಗೂ ಸಚಿವ ಶಿವಲಿಂಗೇಗೌಡ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಲಂಚದ ಆರೋಪ ಹೊರಿಸಿದ್ದರು. ಕ್ರಷರ್ ಅನುಮತಿ ಹಾಗೂ ಡಿಸಿ ಅವರ ವರ್ಗಾವಣೆ ತಡೆಯಲು ಲಕ್ಷಾಂತರ ರೂಪಾಯಿ ಹಣದ ವಹಿವಾಟು ನಡೆದಿದೆ ಎಂಬ ಸ್ಕ್ರೀನ್‌ಶಾಟ್‌ಗಳನ್ನು ಅವರು ಬಿಡುಗಡೆ ಮಾಡಿದ್ದರು. ಈ ಆರೋಪಗಳನ್ನು ಡಿಸಿ ಪಿಎ ಶಶಿಕಿರಣ್ ತಳ್ಳಿಹಾಕಿದ್ದು, ತಮ್ಮ ಹೆಸರಿನಲ್ಲಿ ನಕಲಿ ಚಾಟ್ ಸೃಷ್ಟಿಸಲಾಗಿದೆ ಎಂದು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಂಚಿಕೊಳ್ಳಿ: