ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಹಾಸನ: ನಾಳೆ ಬೆಳಗಿನ ಜಾವ 4 ಗಂಟೆವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶ

ಹಾಸನಾಂಬೆ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ನಾಳೆ ಬೆಳಗಿನ ಜಾವ 4 ಗಂಟೆಯವರೆಗೂ ವಿಸ್ತರಿಸಲಾಗಿದೆ. ಸಚಿವ ಕೆ.ಎಂ. ಶಿವಲಿಂಗೇಗೌಡರ ಈ ನಿರ್ಧಾರದಿಂದ ದೀಪಾವಳಿ ಬಳಿಕ ಬರುವ ಭ...

· ಹಾಸನ
ಹಾಸನಾಂಬೆ ಭಕ್ತರಿಗೆ ಗುಡ್‌ನ್ಯೂಸ್: ನಾಳೆ ಬೆಳಗಿನ ಜಾವ 4 ಗಂಟೆವರೆಗೂ ದೇವಿ ದರ್ಶನಕ್ಕೆ ಅವಕಾಶ, ಸಚಿವರ ಘೋಷಣೆ!
ಹಂಚಿಕೊಳ್ಳಿ:

ಹಾಸನದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಹಾಸನಾಂಬೆ ದರ್ಶನದ ಅವಧಿಯನ್ನು ವಿಸ್ತರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ನಿರ್ಧರಿಸಿದ್ದಾರೆ. ಇದರಂತೆ ನಾಳೆ ಬೆಳಗಿನ ಜಾವ 4 ಗಂಟೆಯವರೆಗೆ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ 8 ರಿಂದ 10 ಗಂಟೆಯವರೆಗೆ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ನಂತರ ಬೆಳಗಿನ ಜಾವದವರೆಗೆ ಭಕ್ತರಿಗೆ ನಿರಂತರವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದೇವಿಯ ದರ್ಶನದಿಂದ ಯಾರೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಂಚಿಕೊಳ್ಳಿ: