ಮುಖ್ಯ ವಿಷಯಕ್ಕೆ ಹೋಗಿ
The Karnataka Today
10 Oct
ಸುದ್ದಿ
ಸುದ್ದಿ

ಹೆಬ್ರಿ: ಕಾಲೇಜಿನಲ್ಲಿ ಅರಣ್ಯ ಸಂಪತ್ತಿನ 'ಕಾಡಿನಿಂದ ಕಾಲೇಜಿಗೆ' ವಸ್ತು ಪ್ರದರ್ಶನ

ಹೆಬ್ರಿ : ಹೆಬ್ರಿ ಅರಣ್ಯ ವಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ (NSS) ಸಹಯೋಗದಲ್ಲಿ ‘ಕಾಡಿನಿಂದ ಕಾಲೇಜಿಗೆ’ ಎಂಬ ಅರಣ್ಯ ವಸ್ತು ಪ್ರದರ್ಶನವನ್ನು ವ...

· ಉಡುಪಿ
ಹೆಬ್ರಿ ಕಾಡಿನಿಂದ ಕಾಲೇಜಿಗೆ ” ವಸ್ತು ಪ್ರದರ್ಶನ ” ವಿಶೇಷ ಕಾರ್ಯಕ್ರಮ.
ಹಂಚಿಕೊಳ್ಳಿ:

 

ಹೆಬ್ರಿ : ಹೆಬ್ರಿ ಅರಣ್ಯ ವಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ (NSS) ಸಹಯೋಗದಲ್ಲಿ ‘ಕಾಡಿನಿಂದ ಕಾಲೇಜಿಗೆ’ ಎಂಬ ಅರಣ್ಯ ವಸ್ತು ಪ್ರದರ್ಶನವನ್ನು ವಿಶೇಷ ಕಾರ್ಯಕ್ರಮ ಬುಧವಾರ ಕಾಲೇಜಿನಲ್ಲಿ ಆಯೋಜಿಸಲಾಯಿತು.

ರಾಜ್ಯದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅರಣ್ಯ ಸಂರಕ್ಷಣೆ ಹಾಗೂ ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಅರಣ್ಯ ಸಂಪತ್ತಿನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಯುವಜನರು ಪರಿಸರ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಹೆಬ್ರಿ ಅರಣ್ಯ ಇಲಾಖೆಯ ವಲಯ ಅರಣ್ಯ ಸಂರಕ್ಷಣಾಧಿಕಾರಿ ಸಿದ್ದೇಶ್ ಮಾತನಾಡಿ, ‘ಕಾಡಿನಿಂದ ಕಾಲೇಜಿಗೆ’ ಎಂಬ ಪರಿಕಲ್ಪನೆಯಡಿ ವಸ್ತು ಪ್ರದರ್ಶನವನ್ನು ಆಯೋಜಿಸಿರುವ ಉದ್ದೇಶ ಹಾಗೂ ಅರಣ್ಯದ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್. ಮಾತನಾಡಿ, ಅರಣ್ಯದ ಅಂಚಿನಲ್ಲಿ ವಾಸಿಸುವ ಜನರ ಜೀವನಾನುಭವ ಹಾಗೂ ಅರಣ್ಯ ಮತ್ತು ಮಾನವ ಬದುಕಿನ ನಡುವಿನ ನಿಕಟ ಸಂಬಂಧವನ್ನು ಹಂಚಿಕೊಂಡರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರವೀಣ ಶೆಟ್ಟಿ ಸ್ವಾಗತಿಸಿ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಷ್ಮಾ ರಾವ್, ಐಕ್ಯೂಎಸಿ ಸಂಚಾಲಕರಾದ ಡಾ. ಗಣೇಶ್ ಎಸ್., ಅರಣ್ಯ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದರು.

ವಸ್ತು ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ಅರಣ್ಯ ಸಂಪತ್ತು, ಜೀವವೈವಿಧ್ಯ, ಪರಿಸರ ಸಂರಕ್ಷಣೆ ಹಾಗೂ ಅರಣ್ಯ ಮತ್ತು ಮಾನವ ಜೀವನದ ನಡುವಿನ ಸಂಬಂಧದ ಕುರಿತು ಪ್ರಾಯೋಗಿಕ ಅರಿವು ಮೂಡಿಸಲಾಯಿತು.

 

ಹಂಚಿಕೊಳ್ಳಿ: