ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಹೆಬ್ರಿ ಸರ್ಕಾರಿ ಕಾಲೇಜಿನಲ್ಲಿ ಪುಷ್ಪವನ ಕಾರ್ಯಕ್ರಮ: ಗಿಡಗಳನ್ನು ನೆಟ್ಟ ವಿದ್ಯಾರ್ಥಿಗಳು

ಹೆಬ್ರಿ : ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಐಕ್ಯುಎಸಿ ಮತ್ತು ಎನ್ ಎಸ್ ಎಸ್ ಸಹಯೋಗದೊಂದಿಗೆ ಶನಿವಾರ ‘ಪುಷ್ಪವನ’ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾ...

· ಉಡುಪಿ
ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು‌: ‘ಪುಷ್ಪವನ’ ಕಾರ್ಯಕ್ರಮ.
ಹಂಚಿಕೊಳ್ಳಿ:

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶನಿವಾರ ಪುಷ್ಪವನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಐಕ್ಯುಎಸಿ ಮತ್ತು ಎನ್ ಎಸ್ ಎಸ್ ಘಟಕಗಳ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್ ಭಾಗವಹಿಸಿ ವಿದ್ಯಾರ್ಥಿಗಳ ಶ್ರಮವನ್ನು ಮೆಚ್ಚಿದರು. ಉದ್ಯಾನವನದ ನಿರ್ವಹಣೆಯು ಕಲಿಕಾ ವಾತಾವರಣಕ್ಕೆ ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸುಷ್ಮಾ ರಾವ್, ಡಾ. ಗಣೇಶ್ ಎಸ್, ಪ್ರವೀಣ ಶೆಟ್ಟಿ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ವಿವಿಧ ಹೂವಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಕಾಳಜಿ ಮೆರೆದರು.

ಹಂಚಿಕೊಳ್ಳಿ: