ಮುಖ್ಯ ವಿಷಯಕ್ಕೆ ಹೋಗಿ
The Karnataka Today
7 Oct
Latest
ಸುದ್ದಿ

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯಕ್ರಮ.

ಹೆಬ್ರಿ : ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್ ಎಸ್ ಎಸ್ ಸ್ವಯಂಸೇವಕರು 72ನೇ ವನ್ಯಜೀವ ಸಪ್ತಾಹದ ಅಂಗವಾಗಿ ಸೋಮೇಶ್ವರ ವನ್ಯಜೀವಿ ವಲಯ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮ...

· 1 ನಿಮಿಷ ಓದು· ಉಡುಪಿ
ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯಕ್ರಮ.
ಹಂಚಿಕೊಳ್ಳಿ:

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್ ಎಸ್ ಎಸ್ ಸ್ವಯಂಸೇವಕರು, 72ನೇ ವನ್ಯಜೀವ ಸಪ್ತಾಹದ ಪ್ರಯುಕ್ತ ಸೋಮೇಶ್ವರ ವನ್ಯಜೀವಿ ವಲಯವು ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು.

ವಲಯ ಅಧಿಕಾರಿ ಮಂಜುನಾಥ ಗಾಣಿಗ ಅವರು ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುತ್ತಾ, ಪ್ಲಾಸ್ಟಿಕ್ ತ್ಯಾಜ್ಯಗಳು ಜಲಮೂಲಗಳನ್ನು ಸೇರುವುದರಿಂದ ಪರಿಸರಕ್ಕೆ ಉಂಟಾಗುವ ಹಾನಿಯ ಬಗ್ಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್ ಅವರು ಶುಭ ಕೋರಿದರು.

ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಪ್ರವೀಣ ಶೆಟ್ಟಿ, ಸ್ವಯಂಸೇವಕರು ಮತ್ತು ಸೋಮೇಶ್ವರ ವನ್ಯಜೀವಿ ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಈ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದ್ದರು.

ಹಂಚಿಕೊಳ್ಳಿ: