ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ನಿಂದ ಗಾಂಧಿ ಜಯಂತಿ: ನಾಡ್ಪಾಲು ಸರಕಾರಿ ಶಾಲೆಗೆ ಆರ್ಥಿಕ ನೆರವು.
ಹೆಬ್ರಿ: ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ವತಿಯಿಂದ ನಾಡ್ಪಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ
· 1 ನಿಮಿಷ ಓದು· ಉಡುಪಿ

ಹೆಬ್ರಿ: ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ವತಿಯಿಂದ ನಾಡ್ಪಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದ, ಪೋಷಕರು ಹಾಗೂ ಮಕ್ಕಳ ಸಮ್ಮುಖದಲ್ಲಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ವತಿಯಿಂದ ಗೌರವ ಶಿಕ್ಷಕಿಯರ ಮಾಸಿಕ ವೇತನಕ್ಕೆ ಹತ್ತು ಸಾವಿರವನ್ನು ಶಾಲೆಗೆ ನೀಡಲಾಯಿತು. ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಅಧ್ಯಕ್ಷ ಹರೀಶ್ ಶೆಟ್ಟಿ ನಾಡ್ಪಾಲು, ಹಿರಿಯ ಲಯನ್ಸ್ ಪದಾಧಿಕಾರಿ ಟಿ ಜಿ ಆಚಾರ್ಯ, ಮಾಜಿ ಅಧ್ಯಕ್ಷ ನಾಗೇಶ ನಾಯಕ್ ಸೀತಾನದಿ ಮುಂತಾದವರು ಉಪಸ್ಥಿತರಿದ್ದರು.




