ಮುಖ್ಯ ವಿಷಯಕ್ಕೆ ಹೋಗಿ
The Karnataka Today
6 Oct
Latest
ಸುದ್ದಿ

ಹೆಬ್ರಿಯಲ್ಲಿ ವಿದ್ಯಾರ್ಥಿಗಳಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ: 280 ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು, ಪೋಷಕರು ಶಿಬಿರದಲ್ಲಿ ಭಾಗಿ.

ಹೆಬ್ರಿ : ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ನೇತೃಜೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಯೋಜಕತ್ವದಲ್ಲಿ...

· ಉಡುಪಿ
ಹೆಬ್ರಿಯಲ್ಲಿ ವಿದ್ಯಾರ್ಥಿಗಳಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ:  280 ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು, ಪೋಷಕರು ಶಿಬಿರದಲ್ಲಿ ಭಾಗಿ.
ಹಂಚಿಕೊಳ್ಳಿ:

ಹೆಬ್ರಿ : ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ನೇತೃಜೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಯೋಜಕತ್ವದಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸುಮಾರು 280 ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಹಾಗೂ ಪೋಷಕರು ಶಿಬಿರದ ಪ್ರಯೋಜನವನ್ನು ಪಡೆದರು. ಅಗತ್ಯ ಇರುವ ಶಾಲಾ ಮಕ್ಕಳಿಗೆ ಕನ್ನಡಕವನ್ನು ಕೊಡುವ ಜವಾಬ್ದಾರಿಯನ್ನು ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ವತಿಯಿಂದ ವಹಿಸಿಕೊಳ್ಳಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ವಿಜೇಂದ್ರ ಶೆಟ್ಟಿ ಸೀತಾನದಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಅಧ್ಯಕ್ಷ ಹರೀಶ್ ಶೆಟ್ಟಿ ನಾಡ್ಪಾಲು, ಕಾರ್ಯದರ್ಶಿ ರಘುರಾಮ ಶೆಟ್ಟಿ, ಹಿರಿಯ ಲಯನ್ಸ್ ಸದಸ್ಯರಾದ ಟಿ.ಜಿ ಆಚಾರ್ಯ, ನಾಗೇಶ ನಾಯಕ್, ಡಾ. ಟೀನಾ ದೇಸಾಯಿ, ಪ್ರಸಾದ ನೇತ್ರಾಲಯ ಉಡುಪಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮೋಹನ್ ಕುಮಾರ್ ಭಾಗವಹಿಸಿದ್ದರು. ಉಪ ಪ್ರಾಂಶುಪಾಲ ದಿವಾಕರ ಮರಕಾಲ ಸ್ವಾಗತಿಸಿದರು. ರಘುರಾಮ್ ಶೆಟ್ಟಿ ಧನ್ಯವಾದ ಸಮರ್ಪಣೆ ಮಾಡಿದರು ಶಿಕ್ಷಕ ಪ್ರವೀಣ್ ಶೆಟ್ಟಿ ನಿರೂಪಿಸಿದರು.

ಹಂಚಿಕೊಳ್ಳಿ: