ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಹೊಸಪೇಟೆಯಲ್ಲಿ ನಡೆದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಬಿಕೋ ಎಂದ ಖಾಲಿ ಕುರ್ಚಿಗಳು

Praja Seva Campaign in Hospete ಹೊಸಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಜಾಸೇವಾ ಅಭಿಯಾನದಲ್ಲಿ ಅಧಿಕಾರಿಗಳಿದ್ದರೂ ಅರ್ಜಿದಾರರಿಲ್ಲದೆ ಕುರ್ಚಿಗಳು ಖಾಲಿಯಾಗಿದ್ದವು. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ವೇದಿಕೆಯಲ್ಲ...

· ವಿಜಯನಗರ
ಮನೆ ಬಾಗಿಲಿಗೆ ಬಂತು ಸರ್ಕಾರ.. ಜನರೇ ಇಲ್ಲ! ಹೊಸಪೇಟೆಯಲ್ಲಿ ನಡೆದ 'ಪ್ರಜಾ ಸೇವಾ' ಕಾರ್ಯಕ್ರದಲ್ಲಿ ಕುರ್ಚಿಗಳು ಖಾಲಿ!
ಹಂಚಿಕೊಳ್ಳಿ:

ಹೊಸಪೇಟೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಜಾಸೇವಾ ಅಭಿಯಾನಕ್ಕೆ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಅಧಿಕಾರಿಗಳು ಹಾಜರಿದ್ದರೂ, ಅಹವಾಲು ಸಲ್ಲಿಸಲು ಅರ್ಜಿದಾರರು ಬಾರದಿರುವುದು ಕಂಡುಬಂದಿದೆ. ಈ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಆಸಕ್ತಿ ಕಡಿಮೆಯಾಗಿದೆಯೇ ಅಥವಾ ಪ್ರಚಾರದ ಕೊರತೆಯಿದೆಯೇ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ಆರಂಭವಾಗಿವೆ. ದೀಪಾವಳಿ ಹಬ್ಬ ಮತ್ತು ಇತ್ತೀಚೆಗೆ ವಿವಿಧ ಗಣ್ಯರು ನಗರಕ್ಕೆ ಭೇಟಿ ನೀಡಿದ್ದರಿಂದ ಜನರು ಮೊದಲೇ ಮನವಿ ಸಲ್ಲಿಸಿರುವ ಕಾರಣ ಈ ಕಾರ್ಯಕ್ರಮದಲ್ಲಿ ಜನಸಂದಣಿ ಕಡಿಮೆಯಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸ್ಪಷ್ಟನೆ ನೀಡಿದ್ದಾರೆ.

ಹಂಚಿಕೊಳ್ಳಿ: