ಹುಬ್ಬಳ್ಳಿಯಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೊರಟ್ಟಿ ಆಗ್ರಹ
ಹುಬ್ಬಳ್ಳಿ: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಭಾಪತಿ ಹಾಗೂ ವಿಧಾನ ಪರಿ...

ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಈ ಪ್ರಕರಣದಿಂದ ರಾಜ್ಯದ ಘನತೆಗೆ ಧಕ್ಕೆಯಾಗಿದ್ದು, ಸತ್ಯಾಂಶ ಹೊರಬರಲು ಸಿಬಿಐ ತನಿಖೆ ಅನಿವಾರ್ಯ ಎಂದು ಅವರು ತಿಳಿಸಿದರು. ರಾಜಕೀಯದಲ್ಲಿ ಮೌಲ್ಯಗಳು ಕುಸಿಯುತ್ತಿರುವುದು ಆತಂಕಕಾರಿ ವಿಷಯ ಎಂದು ಅಭಿಪ್ರಾಯಪಟ್ಟ ಅವರು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಸರ್ಕಾರಗಳಿಗೆ ಮನವಿ ಮಾಡಿದರು.




