ಹುಕ್ಕೇರಿ ಆಸ್ಪತ್ರೆ: ಬಿಸಿ ಪಾತ್ರೆಗೆ ಬಿದ್ದ ಮಗುವಿಗೆ ಚಿಕಿತ್ಸೆ ನೀಡದ ವೈದ್ಯರ ನಿರ್ಲಕ್ಷ್ಯ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ(Hukkeri Hospital) ವೈದ್ಯರ ಕರ್ತವ್ಯಲೋಪ ಹಾಗೂ ಆಸ್ಪತ್ರೆ ಆಡಳಿತ ಮಂಡಳಿಯ ಅವ್ಯವಸ್ಥೆ ಮತ್ತೊಮ್ಮೆ ಜಗಜ್ಜಾಹೀರಾಗಿದೆ. ಬಿಸಿ ಅಡು...

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯಲೋಪದ ಪ್ರಕರಣ ಬೆಳಕಿಗೆ ಬಂದಿದೆ. ಅಡುಗೆ ಪಾತ್ರೆಗೆ ಬಿದ್ದು ಶೇ. 50ರಷ್ಟು ಸುಟ್ಟ ಗಾಯಗಳಾಗಿದ್ದ ಎರಡು ವರ್ಷದ ಮಗುವನ್ನು ಪೋಷಕರು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಆ ಸಮಯದಲ್ಲಿ ವೈದ್ಯರು ಹಾಜರಿರಲಿಲ್ಲ. ಇದರಿಂದ ಮಗು ನೋವಿನಿಂದ ನರಳುವಂತಾಯಿತು. ಅಧಿಕಾರಿಗಳ ಎಚ್ಚರಿಕೆಯ ನಂತರ ವೈದ್ಯ ಮಂಜುನಾಥ್ ಸ್ಥಳಕ್ಕೆ ಆಗಮಿಸಿದರು. ವೈದ್ಯರ ಈ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.




