ಹುಣಸೂರು: ಪತಿ ರಾಮಪ್ರಸಾದ್ ಕೊಲೆ ಮಾಡಿದ ಪತ್ನಿ ಪವಿತ್ರಾ ಮತ್ತು ಪ್ರಿಯಕರ ಸುನೀಲ್ ಬಂಧನ
ಮೈಸೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಮೈಸೂರು ಜಿಲ್ಲಾ ಪೊಲೀಸರು (Mysuru Police) ಬಂಧಿಸಿದ್ದಾರೆ. ಮೈಸೂರಿನ ಹುಣಸೂರು (Hunasuru) ತಾಲೂಕಿನ ವಿನೋಬ...

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವಿನೋಬ ಕಾಲೋನಿಯಲ್ಲಿ ಗಾರೆ ಕೆಲಸಗಾರ ರಾಮಪ್ರಸಾದ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಪವಿತ್ರಾ ಮತ್ತು ಆಕೆಯ ಪ್ರಿಯಕರ ಸುನೀಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪವಿತ್ರಾ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಮುಗಿಸಲು ಯೂಟ್ಯೂಬ್ ಮೂಲಕ ಮಾಹಿತಿ ಪಡೆದು ಇಡ್ಲಿಯಲ್ಲಿ ದತ್ತೂರ ಬೀಜದ ಪುಡಿ ಬೆರೆಸಿ ತಿನ್ನಿಸಿದ್ದಳು. ನಂತರ ಆತನ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ರಾಮಪ್ರಸಾದ್ ಸಹೋದರ ಚಂದ್ರಹಾಸ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.




