ಮುಖ್ಯ ವಿಷಯಕ್ಕೆ ಹೋಗಿ
The Karnataka Today
28 Sept
Latest
ಸುದ್ದಿ

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇದೇ ಪ್ರದೇಶದಲ್ಲಿ ಇನ್ನಿಬ್ಬರು ಉಗ್ರರು ಇರಬಹುದು...

ಸಂಪಾದಕ· 1 ನಿಮಿಷ ಓದು
ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ
ಹಂಚಿಕೊಳ್ಳಿ:

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇದೇ ಪ್ರದೇಶದಲ್ಲಿ ಇನ್ನಿಬ್ಬರು ಉಗ್ರರು ಇರಬಹುದು ಎಂದು ಶಂಕಿಸಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಮತ್ತು ಜಮ್ಮು ವಲಯದ ಪೂಂಚ್ ಜಿಲ್ಲೆಯ ಗಡಿಗಳ ಸಮೀಪವಿರುವ ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎತ್ತರದ ಪ್ರದೇಶಗಳಲ್ಲಿ ಈ ಗುಂಡಿನ ಚಕಮಕಿ ನಡೆದಿದೆ. ಎಕೆ-47 ರೈಫಲ್, ಮದ್ದುಗುಂಡುಗಳ ವಶ: ಶ್ರೀನಗರ ಮೂಲದ '15 ಕಾರ್ಪ್ಸ್' (ಇದನ್ನು 'ಚಿನಾರ್ ಕಾರ್ಪ್ಸ್' ಎಂದೂ ಕರೆಯಲಾಗುತ್ತದೆ) ಈ ಹತ್ಯೆಯನ್ನು ಖಚಿತಪಡಿಸಿದೆ.

ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡದ ಸಹಯೋಗದೊಂದಿಗೆ ದೊರೆತ ಮಾಹಿತಿ ಆಧಾರದ ಮೇಲೆ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ ಭದ್ರತಾ ಪಡೆಗಳು ಸ್ಥಳದಿಂದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಅದು ತಿಳಿಸಿದೆ.

ಅಶ್ದಾರ್ ಗಲಿ ಪ್ರದೇಶದಲ್ಲಿ ನಿರ್ದಿಷ್ಟ ಗುಪ್ತಚರ ಮಾಹಿತಿ ದೊರೆತ ನಂತರ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಸೇನೆಯು ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ತಿಳಿಸಿದೆ. ಸೈನಿಕರು ಅನುಮಾನಾಸ್ಪದ ಚಲನವಲನವನ್ನು ಗಮನಿಸಿ ಅವರನ್ನು ತಡೆದಾಗ, ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಆಗ ಎನ್ ಕೌಂಟರ್ ನಡೆದಿದ್ದು, ಒಬ್ಬ ಉಗ್ರ ಹತನಾಗಿದ್ದಾನೆ. ಆತನಿಂದ ಎಕೆ ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಹಂಚಿಕೊಳ್ಳಿ: