ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
ಕಾರ್ಕಳದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ...

ಕಾರ್ಕಳದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಐ. ಕ್ರಿಸ್ಟೋಫರ್ ಕೋಟ್ಯಾನ್, ವಿವಿಧ ಧರ್ಮ ಹಾಗೂ ಜಾತಿಗಳ ನಡುವೆಯೂ ಕರ್ನಾಟಕದಲ್ಲಿರುವ ಕೋಮು ಸೌಹಾರ್ದತೆ ನಾಡಿನ ಹೆಗ್ಗುರುತಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಜೋಸ್ನಾ ಸ್ನೇಹಲತಾ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜಾಲಿ ಜೇಕಬ್ ಉಪಸ್ಥಿತರಿದ್ದರು. ರೇಖಾ ಸಂತೋಷ್ ಕಾರ್ಯಕ್ರಮದ ನಿರೂಪಣೆಯನ್ನು ನಿರ್ವಹಿಸಿದರು.




