ಕೆಪಿಎಸ್ಸಿ ನೇಮಕಾತಿ ಅಕ್ರಮ: ಸಾಹುಕಾರ್ ಮತ್ತು ಬಿ.ವಿ.ಗೀತಾಗೆ 14 ದಿನಗಳ ನ್ಯಾಯಾಂಗ ಬಂಧನ
ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ಬೆನ್ನಲ್ಲೇ, ಕೈಗಾರಿಕಾ ವಿಸ್ತಾರಣಾಧಿಕಾರಿ ನೇಮಕಾತಿಯಲ್ಲೂ ನಡೆದಿರುವ ಅಕ್ರಮದ ತನಿಖೆಯನ್ನು ಇಡಿ ಕೈಗೆತ್ತಿಕೊಂಡಿದೆ. ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿ...

ಕೆಪಿಎಸ್ಸಿ ವಾಣಿಜ್ಯ ಇಲಾಖೆಯ ಐವತ್ತು ಕೈಗಾರಿಕಾ ವಿಸ್ತಾರಣಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಆಯೋಗದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಸಾಹುಕಾರ್ ಅವರು ನಕಲಿ ಆದಾಯ ಪ್ರಮಾಣಪತ್ರ ಬಳಸಿ ಮೀಸಲಾತಿ ಸೌಲಭ್ಯ ಪಡೆದಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಬಿ.ವಿ.ಗೀತಾ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯ ಇವರಿಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2022ರಿಂದ ನಡೆದ ಎಲ್ಲಾ ನೇಮಕಾತಿಗಳ ಮೇಲೆ ಇಡಿ ಕಣ್ಣಿಟ್ಟಿದೆ.




