ಕೊಪ್ಪಳ: ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು
ರಾಹುಲ್ ಗಾಂಧಿ ಅವರು ಈಗ ಜಿರಳೆ ಪಕ್ಷದ ನಾಯಕರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ವಿದ್ಯಾರ್ಥಿ ಹಾಗೂ ನೀಟ್ ಹೋರಾಟದ ನೆಪದಲ್ಲಿ ಕಾಂಗ್ರೆಸ್ ದೇಶದಲ್ಲಿ ಬಾಂಗ್ಲಾ ಮಾದರಿಯ ಅರಾಜಕತೆ ಸೃಷ್ಟ...

ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು, ಕಾಂಗ್ರೆಸ್ ಮತ್ತು ಜಿರಳೆ ಪಕ್ಷದ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಟೀಕಿಸಿದ್ದಾರೆ. ವಿದ್ಯಾರ್ಥಿ ಸಂಘಟನೆಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಾಂಗ್ಲಾದೇಶದ ಮಾದರಿಯಲ್ಲಿ ಭಾರತದಲ್ಲೂ ಹೋರಾಟ ನಡೆಸಲು ರಾಹುಲ್ ಗಾಂಧಿ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ದೂರಿದರು. ಪ್ರಜಾಪ್ರಭುತ್ವದ ಮೂಲಕ ಅಧಿಕಾರಕ್ಕೆ ಬರಲು ಸಾಧ್ಯವಾಗದ ಕಾರಣ ಕಾಂಗ್ರೆಸ್ ಇಂತಹ ಮಾರ್ಗಗಳನ್ನು ಅನುಸರಿಸುತ್ತಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.




