ಮುಖ್ಯ ವಿಷಯಕ್ಕೆ ಹೋಗಿ
The Karnataka Today
12 Oct
ಸುದ್ದಿ
ಸುದ್ದಿ

KPSC Scam| ಭಾಲ್ಕಿಯ ಸಹಕಾರಿ ಬ್ಯಾಂಕ್ ಮೇಲೆ ಇಡಿ ದಾಳಿ ಅಂತ್ಯ

ಬೀದರ್: ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ನಡೆಸಿ...

· ಬೀದರ್
KPSC Scam| ಭಾಲ್ಕಿಯ ಸಹಕಾರಿ ಬ್ಯಾಂಕ್ ಮೇಲೆ ಇಡಿ ದಾಳಿ ಅಂತ್ಯ
ಹಂಚಿಕೊಳ್ಳಿ:

ಬೀದರ್: ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ನಡೆಸಿದ ಶೋಧ ಕಾರ್ಯ ಕೊನೆಗೂ ಅಂತ್ಯಗೊಂಡಿದೆ.

ಭಾಲ್ಕಿಯಲ್ಲಿರುವ ‘ಓಂ ಲಕ್ಷ್ಮಿ ಸೌಹಾರ್ದ ಸಹಕಾರಿ ಬ್ಯಾಂಕ್’ ಮೇಲೆ ದಾಳಿ ನಡೆಸಿದ್ದ ಇಡಿ ತಂಡ, ಸತತ 10 ಗಂಟೆಗಳ ಕಾಲ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ.

ಶುಕ್ರವಾರ ಸಂಜೆಯಿಂದ ಆರಂಭವಾದ ಕಾರ್ಯಾಚರಣೆ ತಡರಾತ್ರಿ 2 ಗಂಟೆಯವರೆಗೂ ಮುಂದುವರಿಯಿತು. ಬ್ಯಾಂಕ್‌ನ ಬಾಗಿಲುಗಳಿಗೆ ಲಾಕ್ ಹಾಕಿಕೊಂಡು ಒಳಗಿನಿಂದಲೇ ಪರಿಶೀಲನೆ ನಡೆಸಿದ ಅಧಿಕಾರಿಗಳು, ಹಣಕಾಸು ವಹಿವಾಟುಗಳಿಗೆ ಸಂಬಂಧಿಸಿದ ಪ್ರಮುಖ ಕಡತಗಳನ್ನು ಜಾಲಾಡಿದ್ದಾರೆ.

 

ಪಶುವೈದ್ಯರ ಹುದ್ದೆ ಕೊಡಿಸುವುದಾಗಿ ನಂಬಿಸಿ ಅಭ್ಯರ್ಥಿಗಳಿಂದ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಆರೋಪಿ ಕನ್ನಾಳೆ ಇದೇ ಬ್ಯಾಂಕ್ ಖಾತೆಗೆ ಪಾವತಿಸಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಆರೋಪಿ ಕನ್ನಾಳೆಯನ್ನು ಸ್ವತಃ ಭಾಲ್ಕಿಗೆ ಕರೆತಂದು, ಆತನ ಸಮ್ಮುಖದಲ್ಲೇ ಬ್ಯಾಂಕ್ ವಹಿವಾಟುಗಳ ಕುರಿತು ಮುಖಾಮುಖಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬ್ಯಾಂಕ್‌ನಲ್ಲಿದ್ದ ಹಣದ ವರ್ಗಾವಣೆ, ಖಾತೆ ವಿವರಗಳು ಮತ್ತು ನಗದು ಜಮೆಯ ಸಮಗ್ರ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡ ಇಡಿ ತಂಡ, ತಡರಾತ್ರಿ ಕಾರ್ಯಾಚರಣೆ ಮುಗಿಸಿ ಬೆಂಗಳೂರಿಗೆ ವಾಪಸಾಗಿದೆ. ಪರಿಶೀಲನೆಯ ವೇಳೆ ಸಿಕ್ಕ ಮಹತ್ವದ ಸುಳಿವುಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿಗೆ ವಿಚಾರಣೆಯ ಬಿಸಿ ತಟ್ಟುವ ಸಾಧ್ಯತೆಯಿದೆ.

ಹಂಚಿಕೊಳ್ಳಿ: