ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳ ಪೋಷಕ–ಶಿಕ್ಷಕರ ಸಭೆ
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ ,ಹಾಜರಾತಿ ಹಾಗೂ ಉಜ್ವಲ ಭವಿಷ್ಯದ ನಿರ್ಮಾಣಕ್ಕೆ ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಅತ್ಯಗತ್ಯ ಎಂಬ ಆಶಯದೊಂದಿಗೆ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜ...

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕ–ಶಿಕ್ಷಕರ ಸಭೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆಗಳಾದ CA Foundation, CMA, CS ಹಾಗೂ ಬ್ಯಾಂಕಿಂಗ್ ಕ್ಷೇತ್ರಗಳಲ್ಲಿರುವ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ಸಮಯ ಪಾಲನೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೋಷಕರು ಮತ್ತು ಶಿಕ್ಷಕರು ಜಂಟಿಯಾಗಿ ಕೆಲಸ ಮಾಡಬೇಕೆಂದು ಈ ಸಭೆಯಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣವನ್ನು ರೂಪಿಸುವ ನಿಟ್ಟಿನಲ್ಲಿ ಪೋಷಕರು ಮತ್ತು ಉಪನ್ಯಾಸಕರು ಪರಸ್ಪರ ಚರ್ಚೆ ನಡೆಸಿದರು.




