ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಕುಮಟಾದಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ತಂಡಕ್ಕೆ ಜಯ

ರಾಜ್ಯ ಶಿಕ್ಷಣ ಇಲಾಖೆ ನಡೆಸುವ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು ಸಾಧನೆಯ ಹೊಸ ಮೈಲುಗಲ್ಲೊಂದನ್ನು ಸ್ಥಾಪಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕ...

· ಉಡುಪಿ
ವಾಲಿಬಾಲ್‌ನಲ್ಲಿ ಕ್ರೈಸ್ಟ್ ಕಿಂಗ್ ಶಾಲಾ ವಿದ್ಯಾರ್ಥಿನಿಯರ ರಾಜ್ಯಮಟ್ಟದ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ
ಹಂಚಿಕೊಳ್ಳಿ:

ಕುಮಟಾದ ಗಿಬ್ ಪ್ರೌಢಶಾಲೆಯಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. ಏಳು ಮಂದಿ ವಿದ್ಯಾರ್ಥಿನಿಯರನ್ನೊಳಗೊಂಡ ಈ ತಂಡದ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಶ್ಲಾಘಿಸಿದ್ದಾರೆ. ಈ ವಿಜಯದ ಸಂಭ್ರಮಾಚರಣೆಯ ಅಂಗವಾಗಿ ಅಕ್ಟೋಬರ್ 24ರಂದು ಕಾರ್ಕಳದಲ್ಲಿ ಮೆರವಣಿಗೆ ಮತ್ತು ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಹಂಚಿಕೊಳ್ಳಿ: