ಮಡಿಕೇರಿ ದಸರಾ: 2 ಕೋಟಿ ಅನುದಾನವಿದ್ದರೂ ಕಳೆಗುಂದಿದ ದೀಪಾಲಂಕಾರಕ್ಕೆ ಸಾರ್ವಜನಿಕರ ಆಕ್ರೋಶ
2 ಕೋಟಿ ಅನುದಾನ ಏನಾಯ್ತು ಅಂತ ಪ್ರಶ್ನಿಸಿದ ಜನ ಮಡಿಕೇರಿ: ಐತಿಹಾಸಿಕ ದಸರಾ ಸಂಭ್ರಮಕ್ಕೆ ಸಾಕ್ಷಿಯಾಗುವ ಮಂಜಿನ ನಗರಿ ಮಡಿಕೇರಿಯಲ್ಲಿ (Madikeri) ಈ ವರ್ಷ ದೀಪಾಲಂಕಾರದ ಕೊರತೆಯಿಂದ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿ...

ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಈ ಬಾರಿ ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಆದರೂ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಕಳೆದ ವರ್ಷದಷ್ಟು ಅಚ್ಚುಕಟ್ಟಾದ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಇಲ್ಲದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಹಬ್ಬದ ಸಂಭ್ರಮವನ್ನು ಹೆಚ್ಚಿಸಬೇಕಿದ್ದ ದೀಪಾಲಂಕಾರದ ಕೊರತೆಯಿಂದಾಗಿ ಪ್ರವಾಸಿಗರು ಹಾಗೂ ಸ್ಥಳೀಯರು ನಿರಾಸೆಗೊಂಡಿದ್ದಾರೆ. ಬಿಡುಗಡೆಯಾದ ಅನುದಾನವನ್ನು ಯಾವ್ಯಾವ ಕಾರ್ಯಕ್ರಮಗಳಿಗೆ ಎಷ್ಟು ಪ್ರಮಾಣದಲ್ಲಿ ಬಳಸಲಾಗಿದೆ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಹಾಗೂ ಖರ್ಚುವೆಚ್ಚಗಳ ವಿವರವನ್ನು ಬಹಿರಂಗಪಡಿಸುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.




