ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಮಡಿಕೇರಿ: ನೀರು ಸಂಪರ್ಕಕ್ಕಾಗಿ ಮಲ್ಲಿಕಾರ್ಜುನ ನಗರದ ರಸ್ತೆ ಅಗೆದ ನಗರಸಭೆ ಸಿಬ್ಬಂದಿ

– ದಸರಾ ಸಂಭ್ರಮದ ನಡುವೆಯೇ ಬದಲಿ ರಸ್ತೆ ಮಾರ್ಗದಲ್ಲಿ ವಾಹನ ಸವಾರರಿಗೆ ಸಂಕಷ್ಟ! ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ದಸರಾ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ನಗರಕ್ಕೆ ಆಗಮಿಸ...

· ಕೊಡಗು
ಒಂದು ಮನೆಗೆ ನೀರು ಕೊಡಲು ಇಡೀ ರಸ್ತೆಯನ್ನೇ ಅಗೆದ ನಗರಸಭೆ ಸಿಬ್ಬಂದಿ!
ಹಂಚಿಕೊಳ್ಳಿ:

ಮಡಿಕೇರಿಯ ಮಲ್ಲಿಕಾರ್ಜುನ ನಗರದಲ್ಲಿ ಒಬ್ಬರ ಮನೆಗೆ ನೀರು ಪೂರೈಸುವ ಉದ್ದೇಶದಿಂದ ನಗರಸಭೆ ಸಿಬ್ಬಂದಿಗಳಾದ ಖಾನ್ ಮತ್ತು ಸುಬ್ರಹ್ಮಣಿ ರಸ್ತೆಯನ್ನು ಅಗೆದಿದ್ದಾರೆ. ದಸರಾ ಹಬ್ಬದ ಸಂದರ್ಭದಲ್ಲಿ ಪ್ರವಾಸಿಗರು ಮತ್ತು ಸಾರ್ವಜನಿಕರು ಹೆಚ್ಚಾಗಿ ಬಳಸುವ ಈ ಮಾರ್ಗದಲ್ಲಿ ಗುಂಡಿ ತೋಡಿರುವುದರಿಂದ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಉಮೇಶ್ ಎಂಬುವವರ ಮನೆಗೆ ನೀರಿನ ಸಂಪರ್ಕ ಕಲ್ಪಿಸಲು ಕೈಗೊಂಡಿರುವ ಈ ಕಾಮಗಾರಿಯು ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗಿದೆ. ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಜಿಲ್ಲಾಧಿಕಾರಿಗಳು ಮತ್ತು ನಗರಸಭೆ ಆಯುಕ್ತರನ್ನು ಒತ್ತಾಯಿಸಿದ್ದಾರೆ.

ಹಂಚಿಕೊಳ್ಳಿ: