ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಮಡಿಕೇರಿ ಸುತ್ತಮುತ್ತ ಮಳೆ: ಕೆಆರ್‌ಎಸ್ ಅಣೆಕಟ್ಟೆಗೆ 9,457 ಕ್ಯುಸೆಕ್ ನೀರು

ಮಡಿಕೇರಿ: ಕಾವೇರಿ (Cauvery River) ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದ ಹಲವು ತಿಂಗಳುಗಳ ಬಳಿಕ ಕೆಆರ್‌ಎಸ್ ಡ್ಯಾಮ್‌ಗೆ (KRS Dam) ಒಳಹರಿವಿನ ಪ್ರಮಾಣ ಏರಿಕೆ ಕಂಡಿದೆ. ಮಳೆ...

· ಕೊಡಗು
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ – ಕೆಆರ್‌ಎಸ್ ಡ್ಯಾಮ್‌ ಒಳಹರಿವು ಹೆಚ್ಚಳ
ಹಂಚಿಕೊಳ್ಳಿ:

ಕಳೆದ ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕೆಆರ್‌ಎಸ್ ಅಣೆಕಟ್ಟೆಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಈವರೆಗೆ 9,457 ಕ್ಯುಸೆಕ್ ನೀರು ಜಲಾಶಯವನ್ನು ಸೇರುತ್ತಿದ್ದು, ಇದರಿಂದ ನೀರಿನ ಮಟ್ಟ 102.98 ಅಡಿಗೆ ಏರಿಕೆ ಕಂಡಿದೆ. ಪ್ರಸ್ತುತ ಅಣೆಕಟ್ಟೆಯಲ್ಲಿ 25.235 ಟಿಎಂಸಿ ನೀರು ಸಂಗ್ರಹವಿದ್ದು, ಮುನ್ನೆಚ್ಚರಿಕೆಯಾಗಿ 1,589 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಳೆಯಿಂದಾಗಿ ಅಣೆಕಟ್ಟಿನ ನೀರಿನ ಮಟ್ಟದಲ್ಲಿ ಸುಧಾರಣೆ ಕಂಡುಬಂದಿರುವುದು ರೈತರಲ್ಲಿ ಸಂತಸ ಮೂಡಿಸಿದೆ.

ಹಂಚಿಕೊಳ್ಳಿ: