ಮಡಿಕೇರಿಯಲ್ಲಿ ನಾಳೆ ಬೈಕ್ ಟ್ಯಾಕ್ಸಿ ವಿರೋಧಿಸಿ ಆಟೋ ಸಂಚಾರ ಬಂದ್
– ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಆಟೋ ಸಂಚಾರ ಸ್ಥಗಿತ! ಮಡಿಕೇರಿ: ಮಡಿಕೇರಿ ನಗರದಲ್ಲಿ ನಾಳೆ (ಶುಕ್ರವಾರ – ಅ.30) ಆಟೋ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ವಿರೋಧಿಸಿ ಆಟೋ ಮಾಲೀ...

ಮಡಿಕೇರಿ ನಗರದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ವಿರೋಧಿಸಿ ಆಟೋ ಮಾಲೀಕರು ಮತ್ತು ಚಾಲಕರ ಸಂಘ ಶುಕ್ರವಾರ ಅಕ್ಟೋಬರ್ 30ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಆಟೋ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಸಂಘ ತಿಳಿಸಿದೆ. ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳು ಸೇರಿದಂತೆ ಯಾವುದೇ ಆಟೋಗಳು ಸಂಚರಿಸುವುದಿಲ್ಲ. ಪ್ರತಿಭಟನೆಯ ಭಾಗವಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಘ ಹೇಳಿದ್ದು ಸಾರ್ವಜನಿಕರು ಪರ್ಯಾಯ ಸಾರಿಗೆ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಕೋರಿದೆ.




