ಮುಖ್ಯ ವಿಷಯಕ್ಕೆ ಹೋಗಿ
The Karnataka Today
12 Oct
ಸುದ್ದಿ
ಸುದ್ದಿ

ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ – ಚಾಮುಂಡೇಶ್ವರಿ ಉತ್ಸವ ಮೂರ್ತಿ ಶುದ್ಧಿಕಾರ್ಯ ಪೂರ್ಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ (Mysuru Dasara 2026) ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ಚಾಮುಂಡಿ ಬೆಟ್ಟದಲ್ಲ...

· ಮೈಸೂರು
ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ – ಚಾಮುಂಡೇಶ್ವರಿ ಉತ್ಸವ ಮೂರ್ತಿ ಶುದ್ಧಿಕಾರ್ಯ ಪೂರ್ಣ
ಹಂಚಿಕೊಳ್ಳಿ:

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ (Mysuru Dasara 2026) ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ.

ಚಾಮುಂಡಿ ಬೆಟ್ಟದಲ್ಲಿ (Chamundi Hill) ಚಾಮುಂಡೇಶ್ವರಿ ತಾಯಿಯ ಉತ್ಸವ ಮೂರ್ತಿಯು ಶುದ್ಧಿ ಕಾರ್ಯ ನೆರವೇರಿದ್ದು, ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿದೆ.

ಮೈಸೂರು ಅರಮನೆಯಿಂದ ಚಾಮುಂಡಿ ಬೆಟ್ಟಕ್ಕೆ ತರಲಾಗಿರುವ ಮಹಿಷ ಮರ್ದಿನಿ ಅವತಾರದ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಗ್ತಿದ್ದು, ನವರಾತ್ರಿಯ ಪ್ರತಿದಿನ ಚಾಮುಂಡೇಶ್ವರಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಿ, ಉತ್ಸವ ಮೂರ್ತಿಗೆ ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತದೆ.

ಭಾನುವಾರ ಬೆಳಗ್ಗೆ ನಿಗದಿತ ಶುಭ ಲಗ್ನದಲ್ಲಿ ಈ ಬಾರಿಯ ದಸರಾ ಮಹೋತ್ಸವವು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.

100ಕ್ಕೂ ಹೆಚ್ಚು ಧರ್ಮಗುರುಗಳು ಭಾಗಿ
ಈ ಬಾರಿ ಬರದ ನಡುವೆಯೂ ಅದ್ಧೂರಿ ದಸರಾ ಆಚರಣೆ ಮಾಡುತ್ತಿದ್ದು, ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಗುತ್ತದೆ. 100ಕ್ಕೂ ಹೆಚ್ಚು ಧರ್ಮಗುರುಗಳು ಈ ಬಾರಿ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಧರ್ಮಗುರುಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿ, ವಿಐಪಿ ಹಾಗೂ ಸಾರ್ವಜನಿಕರಿಗೂ ಪ್ರತ್ಯೇಕ ಆಸನಗಳಿದ್ದು, ಪೊಲೀಸ್ ಬಂದೋಬಸ್ತ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ.

ಹಂಚಿಕೊಳ್ಳಿ: