ಮುಖ್ಯ ವಿಷಯಕ್ಕೆ ಹೋಗಿ
The Karnataka Today
17 Oct
ಸುದ್ದಿ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಮೈಸೂರು: ಸ್ಟಿಂಗ್ ಪ್ರಕರಣ ಹೊರಬಂದ ನಂತರ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು (Siddaramaiah) ಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿಯಾಗಿದ್ದಾರೆ. ಮಂಡ್ಯದಲ್ಲಿ ಕಾವೇರಿ ಆರತಿಗೆ ಚಾಲನೆ ನೀಡಿ...

· ಮೈಸೂರು
ಮೈಸೂರಿನಲ್ಲಿ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆಶಿ – ಕೆಲಕಾಲ ಮಾತುಕತೆ
ಹಂಚಿಕೊಳ್ಳಿ:

ಮಂಡ್ಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮುಗಿಸಿ ಮೈಸೂರಿಗೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ಅವರು, ಕುವೆಂಪು ನಗರದಲ್ಲಿರುವ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಭೇಟಿಯಾದರು. ಇತ್ತೀಚೆಗೆ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇವರಿಬ್ಬರೂ ಸುಮಾರು 20 ನಿಮಿಷಗಳ ಕಾಲ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು. ಈ ವಿವಾದಾತ್ಮಕ ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಸಿದ್ದರಾಮಯ್ಯ ಅವರು ಈಗಾಗಲೇ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.

ಹಂಚಿಕೊಳ್ಳಿ: