ಮುಖ್ಯ ವಿಷಯಕ್ಕೆ ಹೋಗಿ
The Karnataka Today
17 Oct
ಸುದ್ದಿ

ಮೈಸೂರು: 9 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕಾರ್ತಿಕ್‍ಗೆ ಗಲ್ಲು ಶಿಕ್ಷೆ

ಕಳೆದ ದಸರಾ ಸಮಯದಲ್ಲಿ ಗುಲ್ಬರ್ಗಾದಿಂದ ಬಲೂನ್ ಮಾರಾಟ ಮಾಡಲು ಕುಟುಂಬ ಸಮೇತ ಮೈಸೂರಿಗೆ ಬಂದಿದ್ದ ಬಾಲಕಿಯು, ದಸರಾ ವಸ್ತುಪ್ರದರ್ಶನದ ಬಳಿಯಿದ್ದ ಟೆಂಟ್‌ನಲ್ಲಿ ಮಲಗಿದ್ದಾಗ ಈ ದುರಂತ ಸಂಭವಿಸಿತ್ತು.

· ಮೈಸೂರು
ದಸರಾ ವೇಳೆ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾ*ರ, ಕೊ*ಲೆ: ಕಾಮುಕನಿಗೆ ಗಲ್ಲು ಶಿಕ್ಷೆ
ಹಂಚಿಕೊಳ್ಳಿ:

ಮೈಸೂರಿನಲ್ಲಿ ಕಳೆದ ದಸರಾ ಮಹೋತ್ಸವದ ಅವಧಿಯಲ್ಲಿ ನಡೆದಿದ್ದ 9 ವರ್ಷದ ಬಾಲಕಿಯ ಮೇಲಿನ ದೌರ್ಜನ್ಯ ಮತ್ತು ಹತ್ಯೆ ಪ್ರಕರಣದಲ್ಲಿ ಮೈಸೂರು ಶೀಘ್ರಗತಿ ನ್ಯಾಯಾಲಯವು ತೀರ್ಪು ನೀಡಿದೆ. ನ್ಯಾಯಾಧೀಶರಾದ ಆನಂದ್ ಪಿ. ವಘಾಡೆ ಅವರು ಆರೋಪಿ 32 ವರ್ಷದ ಕಾರ್ತಿಕ್ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮರಣದಂಡನೆ ಶಿಕ್ಷೆಯನ್ನು ಪ್ರಕಟಿಸಿದ್ದಾರೆ. ಗುಲ್ಬರ್ಗಾದಿಂದ ಬಂದಿದ್ದ ಬಾಲಕಿಯನ್ನು ಅಪಹರಿಸಿ ಈ ಕೃತ್ಯ ಎಸಗಿದ್ದ ಸಿದ್ದಲಿಂಗಪುರದ ನಿವಾಸಿ ಕಾರ್ತಿಕ್ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆಯ ತನಿಖೆಯನ್ನು ಸಮರ್ಥವಾಗಿ ನಿರ್ವಹಿಸಿದ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮತ್ತು ಇನ್‌ಸ್ಪೆಕ್ಟರ್ ಮಹದೇವಸ್ವಾಮಿ ಅವರ ಕಾರ್ಯವನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಶ್ಲಾಘಿಸಿದ್ದಾರೆ.

ಹಂಚಿಕೊಳ್ಳಿ: