ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾದ ಕ್ರೈಸ್ಟ್ ಕಿಂಗ್ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮೂವರು ಶಟಲ್ ಬ್ಯಾಡ್ಮಿಂಟನ್ ಪಟುಗಳು!
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ...

ಕಾರ್ಕಳ: ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ, ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ಚಾಮರಾಜನಗರ ಜಿಲ್ಲೆಯಲ್ಲಿ ನಡೆಯಲಿರುವ ಮೈಸೂರು ವಿಭಾಗಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಎಂಟನೇ ತರಗತಿಯ ಗ್ರಂಥ ಮತ್ತು ಏಳನೇ ತರಗತಿಯ ಅಂಜನಿ ಕಾಮತ್ ಅವರಿದ್ದ ಪ್ರಾಥಮಿಕ ಶಾಲಾ ಬಾಲಕಿಯರ ತಂಡವು ಮೊದಲ ಸ್ಥಾನವನ್ನು ಗಳಿಸುವುದರೊಂದಿಗೆ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದೆ. ಒಂಬತ್ತನೇ ತರಗತಿಯ ಖುಷಿ ಶೆಟ್ಟಿ ಹಾಗೂ ಹತ್ತನೇ ತರಗತಿಯ ಜೋನ್ನಾ ವೆಲೆನ್ಸಿಯಾ ಫೆರಾವೊ ಅವರನ್ನು ಒಳಗೊಂಡಿದ್ದ ಪ್ರೌಢಶಾಲಾ ತಂಡವು ಮೊದಲ ಸ್ಥಾನವನ್ನು ಪಡೆದಿದ್ದು, ಇದರಲ್ಲಿ ಖುಷಿ ಶೆಟ್ಟಿ ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ.




