ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಮೈಸೂರು: ಯೂಟ್ಯೂಬರ್ ನಿಖಿಲ್ ರವೀಂದ್ರ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ ದಾಖಲು

ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಜೀವನದ ಕ್ಷಣಗಳನ್ನು ವ್ಲಾಗ್ ಮೂಲಕ ಹಂಚಿಕೊಳ್ಳುವ ಯೂಟ್ಯೂಬರ್‌ ಆದ ಮಧು ಗೌಡ ಗಂಡ ನಿಖಿಲ್ ರವೀಂದ್ರ ಕುರಿತಾದ ಗಂಭೀರ ಆರೋಪವೊಂದು ಇದೀಗ ಚರ್ಚೆಗೆ ಗ್ರಾಸವಾಗಿದೆ.

· ಮೈಸೂರು
ಮೈಸೂರಿನಲ್ಲಿ ಯೂಟ್ಯೂಬರ್ ಮಧು ಗೌಡ ಪತಿ ನಿಖಿಲ್ ರವೀಂದ್ರ ವಿರುದ್ಧ 'ಹಿಟ್ ಅಂಡ್ ರನ್' ಆರೋಪ: ದೂರು ದಾಖಲು, ವಿಡಿಯೋ ವೈರಲ್!
ಹಂಚಿಕೊಳ್ಳಿ:

ಅಕ್ಟೋಬರ್ 20ರಂದು ಮೈಸೂರಿನ ವಿಜಯನಗರ 4ನೇ ಹಂತದಲ್ಲಿ ಅಭಿಷೇಕ್ ಎಂಬುವವರ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅಭಿಷೇಕ್ ನೀಡಿದ ದೂರಿನ ಮೇರೆಗೆ ವಿವಿಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತವೆಸಗಿದ ಕಾರು ಯೂಟ್ಯೂಬರ್ ನಿಖಿಲ್ ರವೀಂದ್ರ ಅವರಿಗೆ ಸೇರಿದ್ದು ಎಂದು ಗುರುತಿಸಲಾಗಿದ್ದು, ಚಾಲಕ ಮದ್ಯಪಾನ ಮಾಡಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಹಣದ ಮೂಲಕ ಇತ್ಯರ್ಥಪಡಿಸಲು ಯತ್ನಿಸಲಾಗಿದೆ ಎಂಬ ಸಂತ್ರಸ್ತನ ಹೇಳಿಕೆಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

ಹಂಚಿಕೊಳ್ಳಿ: