ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಮಂಗಳೂರಿನ ಚರ್ಚ್ ಪಾದ್ರಿ ಸಕಲೇಶಪುರದಲ್ಲಿ ಬಂಧನ: ಬಾಲಕರಿಗೆ ಲೈಂಗಿಕ ಕಿರುಕುಳದ ಆರೋಪ

ಮಂಗಳೂರು/ಹಾಸನ: ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ಚರ್ಚ್ ಪಾದ್ರಿಯನ್ನು (Church Priest) ಪಾಂಡೇಶ್ವರ ಠಾಣೆಯ ಪೊಲೀಸರು ಸಕಲೇಶಪುರದಲ್ಲಿ (Sakaleshpur) ಬಂಧಿಸಿದ್ದಾರೆ. ಮಂಗಳೂರಿನ (M...

· ದಕ್ಷಿಣ ಕನ್ನಡ
ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ – ಮಂಗಳೂರಿನ ಚರ್ಚ್ ಪಾದ್ರಿ ಅರೆಸ್ಟ್‌
ಹಂಚಿಕೊಳ್ಳಿ:

ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಫಾದರ್ ಸಿಪ್ರಿಯನ್ ಪಿಂಟೋ ಮೇಲೆ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಇಬ್ಬರು ಮಕ್ಕಳು ತಮ್ಮ ಪೋಷಕರಿಗೆ ವಿಷಯ ತಿಳಿಸಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಾಂಡೇಶ್ವರ ಪೊಲೀಸರು ಸಕಲೇಶಪುರದ ಸಂಬಂಧಿಕರ ಮನೆಯಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಈತ ಪ್ರಾರ್ಥನೆಗೆ ಬಂದಿದ್ದ ಹಲವು ಬಾಲಕರ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಹಂಚಿಕೊಳ್ಳಿ: