ಮಂಗಳೂರಿನಲ್ಲಿ ಸುಲಿಗೆಗೆ ಯತ್ನಿಸಿದ ಪಾಂಡೇಶ್ವರ ಠಾಣೆಯ ಮೂವರು ಪೊಲೀಸರ ಬಂಧನ
ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ವಾಕಿಂಗ್ ಮಾಡುತ್ತಿದ್ದ ನಾಗರಿಕರ ಮೊಬೈಲ್, ಎಟಿಎಂ ಕಾರ್ಡ್ ಕಸಿದುಕೊಂಡು ಸುಲಿಗೆ ಮಾಡುತ್ತಿದ್ದ ಗಂಭೀರ ಆರೋಪದಲ್ಲಿ ಮೂವರು ಪೊಲೀಸರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವ...

ಮಂಗಳೂರಿನ ನೆಹರೂ ಮೈದಾನದಲ್ಲಿ ವಾಕಿಂಗ್ ಮಾಡುತ್ತಿದ್ದ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್ ಮತ್ತು ಎಟಿಎಂ ಕಾರ್ಡ್ ದೋಚಲು ಯತ್ನಿಸಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಬಂಧಿಸಲಾಗಿದೆ. ಪಾಂಡೇಶ್ವರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಈರಣ್ಣ ಬೆನ್ನಿ ಹಾಗೂ ಕಾನ್‌ಸ್ಟೇಬಲ್‌ಗಳಾದ ಶಿವರಾಜ್ ಮತ್ತು ಉಮಾನಾಥ್ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗಸ್ತು ಕರ್ತವ್ಯಕ್ಕಾಗಿ ಬಳಸುವ ಹೊಯ್ಸಳ ವಾಹನದಲ್ಲೇ ಬಂದು ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ ಸುಲಿಗೆಗೆ ಯತ್ನಿಸಿದ್ದರಿಂದ ಇವರ ವಿರುದ್ಧ ಪ್ರಕರಣ ದಾಖಲಾಗಿದೆ. ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಈ ವಿಷಯವನ್ನು ಖಚಿತಪಡಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.




