ನವೆಂಬರ್ 1 ರಂದು ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ
ಬೆಂಗಳೂರು: ಕನ್ನಡ ರಾಜ್ಯೋತ್ಸವದ(Karnataka Rajyotsava) ಶುಭ ಸಂದರ್ಭದಲ್ಲಿ ಕನ್ನಡಿಗರಿಗೆ ಹಾಗೂ ಬೆಂಗಳೂರು-ಮುಂಬೈ(Bengaluru-Mumbai) ಮಾರ್ಗದ ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ(Indian Railways) ಭರ್ಜ...

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಮುಂಬೈಗೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಸೇವೆಯನ್ನು ಪ್ರಾರಂಭಿಸಲು ರೈಲ್ವೆ ಇಲಾಖೆ ಸಿದ್ಧತೆ ನಡೆಸಿದೆ. ಈ ಸೆಮಿ-ಹೈಸ್ಪೀಡ್ ರೈಲು ಸುಮಾರು 1,118 ಕಿಲೋಮೀಟರ್ ದೂರವನ್ನು ಕೇವಲ 15 ರಿಂದ 16 ಗಂಟೆಗಳಲ್ಲಿ ತಲುಪಲಿದೆ. ಪ್ರಸ್ತುತ ಉದ್ಯಾನ ಎಕ್ಸ್‌ಪ್ರೆಸ್‌ನಂತಹ ರೈಲುಗಳು ಈ ಪ್ರಯಾಣಕ್ಕೆ 22 ರಿಂದ 24 ಗಂಟೆ ತೆಗೆದುಕೊಳ್ಳುತ್ತಿದ್ದು, ಹೊಸ ಸೇವೆಯಿಂದ ಪ್ರಯಾಣಿಕರಿಗೆ ಸಮಯದ ಉಳಿತಾಯವಾಗಲಿದೆ. ಈ ರೈಲು ಸಂಚಾರವು ಉಭಯ ನಗರಗಳ ನಡುವಿನ ವಾಣಿಜ್ಯ ಹಾಗೂ ಪ್ರವಾಸೋದ್ಯಮ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡಲಿದೆ.




