ಪಡುಕುಡೂರಿನಲ್ಲಿ ಶತಮಾನೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಆರಂಭ
ಯಕ್ಷಗಾನ ತರಭೇತಿಯನ್ನು ಉದ್ಘಾಟಿಸಿದ ಪಡುಪರ್ಕಳ ಹರೀಶ್ ಶೆಟ್ಟಿ. ಪಡುಕುಡೂರು (ಹೆಬ್ರಿ ) : ಶತಮಾನೋತ್ಸವ ಸಂಭ್ರಮದಲ್ಲಿರುವ ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೇ ವಿಧ್ಯಾರ್ಥಿಗಳ ತಂಡದ...

ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಂಗವಾಗಿ ಹಳೇ ವಿದ್ಯಾರ್ಥಿಗಳ ತಂಡದಿಂದ ಯಕ್ಷಗಾನ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಮುಂಬೈ ಉದ್ಯಮಿ ಹರೀಶ್ ಶೆಟ್ಟಿ ಪಡುಪರ್ಕಳ ಈ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸತೀಶ್ ಮಡಿವಾಳ, ನಾರಾಯಣ ಆಚಾರ್ಯ ಗರ್ಧರಬೆಟ್ಟು ಮತ್ತು ಸಂತೋಷ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಯಕ್ಷಗಾನ ತಂಡವು ತರಬೇತಿಯನ್ನು ನೀಡಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಮುಖ್ಯ ಶಿಕ್ಷಕ ಹರೀಶ್ ಪೂಜಾರಿ.ಎಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




