ಮುಖ್ಯ ವಿಷಯಕ್ಕೆ ಹೋಗಿ
The Karnataka Today
7 Oct
Latest
ಸುದ್ದಿ

ಪ್ರೌಢಶಾಲಾ ಕ್ರೀಡಾಕೂಟ: ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕ್ರೈಸ್ಟ್‌ ಕಿಂಗ್ ಪ್ರೌಢಶಾಲೆಯ 10ನೇ ತರಗತಿಯ ಅಂಕುಶ್ ಹಾಗೂ ಲಕ್ಷಣ್ಯ!

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಹಾಗೂ ಎಂ.ಎನ್.ಡಿ.ಎಸ್.ಎಮ್ ಪ್ರೌಢಶಾಲೆ ಮುದ್ರಾಡಿ ಇವರ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಕಾರ್ಕಳದ ಕ್ರೈಸ್ಟ್‌ ಕಿಂಗ್ ಆಂಗ್ಲಮಾ...

· 1 ನಿಮಿಷ ಓದು· ಉಡುಪಿ
ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ ಕಿಂಗ್ ಪ್ರೌಢಶಾಲೆಯ ಹತ್ತನೇ ತರಗತಿಯ ಅಂಕುಶ್ ಹಾಗೂ ಲಕ್ಷಣ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹಂಚಿಕೊಳ್ಳಿ:

ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ ಮತ್ತು ಎಂ.ಎನ್.ಡಿ.ಎಸ್.ಎಮ್ ಪ್ರೌಢಶಾಲೆ ಮುದ್ರಾಡಿ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ, ಕಾರ್ಕಳದ ಕ್ರೈಸ್ಟ್‌ ಕಿಂಗ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮೆರೆದಿದ್ದಾರೆ.

ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಅಂಕುಶ್ ಗುಂಡೆಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಮತ್ತು ಲಕ್ಷಣ್ಯ ಚಕ್ರ ಎಸೆತ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದು, ಈ ಮೂಲಕ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.

ಹಂಚಿಕೊಳ್ಳಿ: