ರಾಜೀನಾಮೆ: ಕೇಂದ್ರ ಸಚಿವ ಸ್ಥಾನ ತೊರೆಯಲು ಮುಂದಾದ ಎಲ್ ಮುರುಗನ್, ಪ್ರಧಾನಿ ಮೋದಿಗೆ ಪತ್ರ
ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಎಲ್ ಮುರುಗನ್ ನಿರ್ಧರಿಸಿದ್ದಾರೆ. ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಮ್ಮ ರಾಜೀನಾಮೆ ಕುರಿತು ಸುದೀರ್ಘ ಮಾಹಿತಿ ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವ ಎಲ್ ಮುರುಗನ್ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. 2029ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ತಮಿಳುನಾಡಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲು ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಸಚಿವ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ಕೋರಿರುವ ಅವರು, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕೆಲಸ ಮಾಡಲು ಸಿಕ್ಕ ಅವಕಾಶವನ್ನು ತಮ್ಮ ಜೀವನದ ಸೌಭಾಗ್ಯ ಎಂದು ಬಣ್ಣಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷಕ್ಕಾಗಿ ದುಡಿದಿರುವ ತಾವು, ರಾಜ್ಯದ ಅಭಿವೃದ್ಧಿಗಾಗಿ ತಳಮಟ್ಟದಲ್ಲಿ ಕೆಲಸ ಮಾಡಲು ಬಯಸುತ್ತಿರುವುದಾಗಿ ತಿಳಿಸಿದ್ದಾರೆ.




