ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಸೂಚನೆ
ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆಯು ಬುಧವಾರ ಸುತ್ತೋಲೆ ಹೊರಡಿಸಿದೆ. ರಾಷ್ಟ್ರೀ...

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕೆಂದು ಶಿಕ್ಷಣ ಇಲಾಖೆಯು ಬುಧವಾರ ಸುತ್ತೋಲೆ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು ಮತ್ತು ನಾಡಹಬ್ಬಗಳನ್ನು ನಿಗದಿತ ದಿನದಂದೇ ಗೌರವಪೂರ್ವಕವಾಗಿ ಆಚರಿಸುವಂತೆ ಇಲಾಖೆಯು ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಕಾರ್ಯಕ್ರಮವನ್ನು ಸಡಗರದಿಂದ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.




