ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು 6 ಜಿಲ್ಲೆಗಳಿಗೆ ಆರೆಂಜ್ ಮತ್ತು 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದು, ಕರಾವಳ...

· ಬೆಂಗಳೂರು ನಗರ
ಬೆಂಗಳೂರಲ್ಲಿ ಇನ್ನೂ ಎಷ್ಟು ದಿನ ಮಳೆ ಬರುತ್ತೆ? ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌!
ಹಂಚಿಕೊಳ್ಳಿ:

ಭಾರತೀಯ ಹವಾಮಾನ ಇಲಾಖೆಯು ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ರಾಜ್ಯದ ವಿವಿಧೆಡೆ ಮಳೆಯ ಆರ್ಭಟ ಹೆಚ್ಚಾಗಿದ್ದು, ಗದಗ ಜಿಲ್ಲೆಯ ಚಿಕ್ಕಹಂದಿಗೋಳ ಗ್ರಾಮದಲ್ಲಿ ಸಿಡಿಲು ಬಡಿದು ಮಾಬುಸಾಬ್ ಮುಲ್ಲಾನವರ್ ಎಂಬುವವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಸಂಜೆ ವೇಳೆ ಸುರಿಯುತ್ತಿರುವ ಮಳೆಯಿಂದಾಗಿ ಸಂಚಾರ ದಟ್ಟಣೆ ಮತ್ತು ರಸ್ತೆಗಳಲ್ಲಿ ನೀರು ನಿಲ್ಲುವ ಸಮಸ್ಯೆ ಉಂಟಾಗಿದೆ.

ಹಂಚಿಕೊಳ್ಳಿ: