ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಸಾಗರದಲ್ಲಿ ಹೊಸ ಕಾರು ನಿಯಂತ್ರಣ ತಪ್ಪಿ ಬೈಕ್ ಸವಾರರಿಗೆ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಶಿವಮೊಗ್ಗ: ದಸರಾ ಹಬ್ಬದ ಸಂಭ್ರಮದಲ್ಲಿ ಕಾರನ್ನು (Car) ಡೆಲಿವರಿ ಪಡೆದು, ರಸ್ತೆಗಿಳಿಸುವ ವೇಳೆಯೇ ಭೀಕರ ಅಪಘಾತ (Accident) ನಡೆದ ಘಟನೆ ಸಾಗರದಲ್ಲಿ (Sagar) ನಡೆದಿದೆ‌. ನಗರದ ಮಾರುತಿ ಕಾರು ಶೋರೂಮ್‌ ಬಳಿ ಈ ಘಟನೆ ನಡ...

· ಶಿವಮೊಗ್ಗ
ಶೋರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು – ಬೈಕ್ ಸವಾರರಿಗೆ ಗಂಭೀರ ಗಾಯ
ಹಂಚಿಕೊಳ್ಳಿ:

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ಮಾರುತಿ ಕಾರು ಶೋರೂಮ್‌ನಿಂದ ಹೊಸ ವಾಹನವನ್ನು ಪಡೆದು ಹೊರಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಶೋರೂಮ್‌ನ ಬ್ಯಾರಿಕೇಡ್‌ಗೆ ಅಪ್ಪಳಿಸಿದ ಕಾರು ನಂತರ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಗಾಯಗೊಂಡ ಇಬ್ಬರು ಸವಾರರನ್ನು ತಕ್ಷಣ ಸಾಗರ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸ್ಥಳೀಯ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ: