ಸೌತಡ್ಕ ದೇವಾಲಯದ ಬಳಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ರಾಘವ ಭಂಡಾರಿ
ಮಂಗಳೂರು: ಸೌತಡ್ಕ ದೇವಾಲಯದ (Sowthadka Temple) ಎದುರು ಮಾಜಿ ರೌಡಿಶೀಟರ್ ಒಬ್ಬ ಹೂವಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಯರ (Womens) ಮೇಲೆ ಹಲ್ಲೆ ನಡೆಸಿದ್ದಾನೆ. ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ಹೊರಭಾಗದಲ್ಲಿರುವ...

ಬೆಳ್ತಂಗಡಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ಆವರಣದಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಯರ ಮೇಲೆ ಕೊಕ್ಕಡದ ರಾಘವ ಭಂಡಾರಿ ಹಲ್ಲೆ ನಡೆಸಿದ್ದಾರೆ. ಅಂಗಡಿಯ ಟೆಂಡರ್ ವಿಚಾರವಾಗಿ ಈ ಗಲಾಟೆ ನಡೆದಿದ್ದು, ರಾಘವ ಭಂಡಾರಿ ಬಲವಂತವಾಗಿ ಅಂಗಡಿಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




