ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ
ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾರಾಡಿ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿರುತ್ತದೆ.
· 1 ನಿಮಿಷ ಓದು· ಉಡುಪಿ

ಗ್ರಾಮಸ್ಥರ ಮನವಿಗೆ ಓಗೊಟ್ಟು ಅನುದಾನವನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹಾಗೂ ಈ ಅನುದಾನವನ್ನು ತರುವಲ್ಲಿ ನೆರವಾದ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರಿಗೆ ಗ್ರಾಮಸ್ಥರ ಪರವಾಗಿ ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಅರುಣ್ ಪ್ರಸಾದ್ ಜೈನ್ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.




