ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಶಿವಮೊಗ್ಗ: ಬಿಎಸ್‌ವೈಗೆ ಬನ್ನಿ ನೀಡಿ ಆಶೀರ್ವಾದ ಪಡೆದ ಕೆ.ಎಸ್‌ ಈಶ್ವರಪ್ಪ

ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ (K.S Eshwarappa) ಅವರು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (B.S. Yediyurappa) ಅವರಿಗೆ ಬನ್ನಿ ನೀಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಶಿವಮೊಗ್ಗದ (Shivamo...

· ಶಿವಮೊಗ್ಗ
ಬಿಎಸ್‌ವೈಗೆ ಬನ್ನಿ ನೀಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಈಶ್ವರಪ್ಪ
ಹಂಚಿಕೊಳ್ಳಿ:

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನಡೆದ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ಈಶ್ವರಪ್ಪ ಅವರು ಯಡಿಯೂರಪ್ಪನವರ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಶಿವಮೊಗ್ಗ ಮಹಾನಗರ ಪಾಲಿಕೆ ಆಯೋಜಿಸಿದ್ದ ಈ ಸಮಾರಂಭದಲ್ಲಿ ಇಬ್ಬರೂ ನಾಯಕರು ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ಶುಭಾಶಯಗಳನ್ನು ಕೋರಿದರು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ನಾಯಕರು ಸೌಹಾರ್ದಯುತವಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಹಂಚಿಕೊಳ್ಳಿ: