ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಶಿವಮೊಗ್ಗ: ಕೆಎಸ್‌ಓಯು ಪರೀಕ್ಷೆಯಲ್ಲಿ ಹಣ ಪಡೆದು ನಕಲಿಗೆ ಅವಕಾಶ ನೀಡುತ್ತಿರುವ ಆರೋಪ

ಶಿವಮೊಗ್ಗ: ರಾಜ್ಯದಲ್ಲಿ ಕೆಪಿಎಸ್‌ಸಿ (KPSC) ವಿವಾದದ ಬಳಿಕ ಇದೀಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಅಕ್ರಮವೊಂದು ಬೆಳಕಿಗೆ ಬಂದಿದ್ದು, ಹಣ ಕೊಟ್ಟರೇ ಮೊಬೈಲ್, ಪುಸ್...

· ಶಿವಮೊಗ್ಗ
ರಾಜ್ಯದಲ್ಲಿ KPSC ಆಯ್ತು, ಇದೀಗ KSOU ಸರದಿ – ಹಣ ಕೊಟ್ರೆ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ
ಹಂಚಿಕೊಳ್ಳಿ:

ಶಿವಮೊಗ್ಗದ ಆಲ್ಕೋಳ ಸರ್ಕಲ್ ಬಳಿ ಇರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಪರೀಕ್ಷಾ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ನೇತೃತ್ವದಲ್ಲಿ ಹಣ ನೀಡಿದ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಪುಸ್ತಕಗಳನ್ನು ಬಳಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಪರೀಕ್ಷಾ ಕೇಂದ್ರದ ಸಿಬ್ಬಂದಿಗಳಾದ ವಿನಯಾ ಕೆ.ಜೆ., ನಿಂಗಾ ನಾಯ್ಕ್, ಯೋಗೇಶ್ ಗೌಡ ಮತ್ತು ಹರೀಶ್ ಮೂಲಕ ಪ್ರತಿ ವಿಷಯಕ್ಕೆ ಸಾವಿರ ರೂಪಾಯಿ ಸಂಗ್ರಹಿಸಲಾಗುತ್ತಿದೆ. ಅಕ್ಟೋಬರ್ 7ರಿಂದ ಆರಂಭವಾಗಿರುವ ಈ ಪರೀಕ್ಷೆಗಳು ನವೆಂಬರ್ 20ರವರೆಗೆ ನಡೆಯಲಿದ್ದು, ದಂಧೆಯ ವಿಡಿಯೋ ಸಾಕ್ಷ್ಯಗಳು ಲಭ್ಯವಾಗಿವೆ.

ಹಂಚಿಕೊಳ್ಳಿ: