ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಶಿವಮೊಗ್ಗ: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಪತಿ ಮತ್ತು ಅತ್ತೆಗೆ 10 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿ ಮತ್ತು ಅತ್ತೆಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಶಿವಮೊಗ್ಗದ ನ್...

· ಶಿವಮೊಗ್ಗ
ವರದಕ್ಷಿಣೆ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ – ಪತಿ, ಅತ್ತೆಗೆ 10 ವರ್ಷ ಜೈಲು
ಹಂಚಿಕೊಳ್ಳಿ:

ಶಿವಮೊಗ್ಗದ ಹಾಲುಗುಡ್ಡೆ ಗ್ರಾಮದಲ್ಲಿ 2021ರಲ್ಲಿ ಜ್ಯೋತಿ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ನೀಡಿದೆ. ಹೆಚ್ಚುವರಿ ವರದಕ್ಷಿಣೆಗಾಗಿ ಜ್ಯೋತಿಗೆ ಕಿರುಕುಳ ನೀಡುತ್ತಿದ್ದ ಪತಿ ದಯಾನಂದ್ ಮತ್ತು ಅತ್ತೆ ಸುಮಿತ್ರಾ ದೋಷಿಗಳೆಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು ಇಬ್ಬರಿಗೂ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, ಒಟ್ಟು 2.24 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಹಂಚಿಕೊಳ್ಳಿ: