ಮುಖ್ಯ ವಿಷಯಕ್ಕೆ ಹೋಗಿ
The Karnataka Today
12 Oct
ಸುದ್ದಿ
ಸುದ್ದಿ

ಸಿದ್ಧರಾಮಯ್ಯ ನಮ್ಮ ನಾಯಕರು, ರಹಸ್ಯ ಭೇಟಿಯ ಅಗತ್ಯವಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ರಹಸ್ಯವಾಗಿ ಭೇಟಿಯಾಗುವ ಯಾವುದೇ ಅಗತ್ಯ ನಮಗಿಲ್ಲ. ಅವರು ನಮ್ಮ ನಾಯಕರು, ನಾವು ಯಾವಾಗ ಬೇಕಾದರೂ ಅವರನ್ನು ಭೇಟಿ ಮಾಡಬಹುದು ಎಂದು ಲೋಕೋಪಯೋಗಿ ಸಚಿ...

· ಬೆಳಗಾವಿ
ಸಿದ್ಧರಾಮಯ್ಯ ನಮ್ಮ ನಾಯಕರು, ರಹಸ್ಯ ಭೇಟಿಯ ಅಗತ್ಯವಿಲ್ಲ: ಸತೀಶ್ ಜಾರಕಿಹೊಳಿ
ಹಂಚಿಕೊಳ್ಳಿ:

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ರಹಸ್ಯವಾಗಿ ಭೇಟಿಯಾಗುವ ಯಾವುದೇ ಅಗತ್ಯ ನಮಗಿಲ್ಲ. ಅವರು ನಮ್ಮ ನಾಯಕರು, ನಾವು ಯಾವಾಗ ಬೇಕಾದರೂ ಅವರನ್ನು ಭೇಟಿ ಮಾಡಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಚಿವ ಜಮೀರ್ ಅಹ್ಮದ್ ಮೂರು ಬಾರಿ ಭೇಟಿಯಾಗಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೂ ನಾವು ಕಡಿಮೆ ಪ್ರಮಾಣದಲ್ಲೇ ಭೇಟಿಯಾಗುತ್ತಿದ್ದೆವು. ಹಾಗಾಗಿ ಇದರಲ್ಲಿ ಯಾವುದೇ ರಹಸ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಕುರಿತು ಪ್ರತಿಕ್ರಿಯಿಸಿದ ಸಚಿವರು, ಹೌದು, ಪ್ರಸ್ತುತ ರಾಜ್ಯದಲ್ಲಿ ಸ್ಟಿಂಗ್ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಯಾವುದೇ ಸಂದರ್ಭದಲ್ಲಿ ಸ್ಟಿಂಗ್ ಆಪರೇಷನ್ ಆಗಬಹುದು, ಎಲ್ಲರೂ ಹುಷಾರಾಗಿರಿ ಎಂದು ಮುಖ್ಯಮಂತ್ರಿಗಳೇ ನಮಗೆ ಎಚ್ಚರಿಕೆ ನೀಡಿದ್ದಾರೆ. ಬೇರೆ ಬೇರೆ ವೇಷಗಳಲ್ಲಿ ಬಂದು, ಆಕರ್ಷಿಸಿ, ಟ್ರ್ಯಾಪ್ ಮಾಡುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದ್ದಾರೆ ಎಂದರು.

ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದಕ್ಕೂ ಈ ಸ್ಟಿಂಗ್ ಆಪರೇಷನ್ ಕಾರಣವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಮಗೆ ಸಿಎಂ ಹೇಳಿದ್ದು ಇಷ್ಟೇ. ಸ್ಟಿಂಗ್‌ ಆಗಬಹುದು, ಎಚ್ಚರಿಕೆಯಿಂದ ಇರಿ ಅಂತ. ವೈಯಕ್ತಿಕವಾಗಿ ನಮಗೆ ಈವರೆಗೂ ಅಂತಹ ಯಾವುದೇ ಅನುಭವವಾಗಿಲ್ಲ ಎಂದು ತಿಳಿಸಿದರು.

 

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮವನ್ನು ಖಂಡಿಸಿದ ಸತೀಶ್ ಜಾರಕಿಹೊಳಿ, “ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಶಾಂತಿಯುತ ಪ್ರತಿಭಟನೆ ಮಾಡುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸಕ್ಕೆ ಕೈಹಾಕಿದರೆ, ಮುಂದೆ ಇದು ಮತ್ತಷ್ಟು ದೊಡ್ಡ ಪ್ರಮಾಣದಲ್ಲಿ ಭುಗಿಲೇಳುತ್ತದೆ” ಎಂದು ಎಚ್ಚರಿಸಿದರು.

ಸಿಜೆಪಿ ಯಾವುದೇ ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಂಡಿಲ್ಲ. ಕೇಂದ್ರ ಸರ್ಕಾರ ಸಿಜೆಪಿ ನಾಯಕರನ್ನು ಕರೆದು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಈ ಹಿಂದೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲೂ ಇದೇ ರೀತಿ ನಡೆದಿತ್ತು. ಈಗ ಬಿಜೆಪಿ ಸಮರ್ಥಕರೇ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಏಕೆ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಪೊಲೀಸರನ್ನು ಮುಂದಿಟ್ಟುಕೊಂಡು ಎಲ್ಲವನ್ನೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಹಂಚಿಕೊಳ್ಳಿ: