ಮುಖ್ಯ ವಿಷಯಕ್ಕೆ ಹೋಗಿ
The Karnataka Today
12 Oct
ಸುದ್ದಿ
ಸುದ್ದಿ

ಮಲೆನಾಡಿಗರಿಗೆ ಬಿಗ್ ಅಪ್‌ಡೇಟ್; ಪ್ರಮುಖ ರೈಲ್ವೆ ಯೋಜನೆಗೆ ಭೂಸ್ವಾಧೀನ: ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ

ಕೇಂದ್ರ ಸಚಿವ ವಿ. ಸೋಮಣ್ಣ ಅವರು ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೋಟೆಗಂಗೂರು ಡಿಪೋ, ಭದ್ರಾವತಿ ನಿಲ್ದಾಣ ಅಭಿವೃದ್ಧಿ ಹಾಗೂ ಹೊಸ ರೈಲ್ವೆ ಮಾರ್ಗಗಳ ಭೂಸ್ವಾಧೀನ ವಿಳಂಬದ ಕುರಿತು ಚ...

· 1 ನಿಮಿಷ ಓದು· ಶಿವಮೊಗ್ಗ
V Somanna: ಮಲೆನಾಡಿಗರಿಗೆ ಬಿಗ್ ಅಪ್‌ಡೇಟ್; ಪ್ರಮುಖ ರೈಲ್ವೆ ಯೋಜನೆಗೆ ಭೂಸ್ವಾಧೀನ
ಹಂಚಿಕೊಳ್ಳಿ:

ಕೇಂದ್ರ ಸಚಿವ ವಿ. ಸೋಮಣ್ಣ ಅವರು ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆಯನ್ನು ನಡೆಸಿದರು. ಕೋಟೆಗಂಗೂರು ಡಿಪೋ, ಭದ್ರಾವತಿ ನಿಲ್ದಾಣದ ಅಭಿವೃದ್ಧಿ ಹಾಗೂ ಹೊಸ ರೈಲ್ವೆ ಮಾರ್ಗಗಳಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ವಿಳಂಬದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ರೈಲ್ವೆ ಯೋಜನೆಗಳ ಪರಿಶೀಲನೆ

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶಿವಮೊಗ್ಗಕ್ಕೆ ಆಗಮಿಸಿ, ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಡಳಿತ ಮತ್ತು ರೈಲ್ವೇ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.

ಈ ಸಭೆಯಲ್ಲಿ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ, ಭದ್ರಾವತಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳು ಮತ್ತು ಬೀರೂರು ಸಮೀಪದ ರಸ್ತೆ ಅಂಡರ್ ಬ್ರಿಡ್ಜ್ (RUB) ಕಾಮಗಾರಿಗಳ ಪ್ರಗತಿಯ ಬಗ್ಗೆ ಸವಿವರವಾಗಿ ಪರಿಶೀಲನೆ ನಡೆಸಲಾಯಿತು.

96 ಕಿ.ಮೀ ಉದ್ದದ ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರು ಹಾಗೂ ಶಿವಮೊಗ್ಗ–ಹರಿಹರ ಹೊಸ ರೈಲ್ವೆ ಮಾರ್ಗ ಯೋಜನೆಗಳ ಪ್ರಸ್ತುತ ಸ್ಥಿತಿಗತಿಯ ಕುರಿತು ಮಾಹಿತಿ ಪಡೆದ ಸಚಿವ ವಿ ಸೋಮಣ್ಣ ಅವರು, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗಿರುವ ವಿಳಂಬ ಹಾಗೂ ಕಾಮಗಾರಿಗಳು ನಿಂತಿರುವ ವಿಷಯದ ಕುರಿತು ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿದರು.

ಈ ಪರಿಶೀಲನಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕ ಚನ್ನಬಸಪ್ಪ, ಎಂಎಲ್ಸಿ ಧನಂಜಯ ಸರ್ಜಿ ಹಾಗೂ ನೈರುತ್ಯ ರೈಲ್ವೆ, ಜಿಲ್ಲಾಡಳಿತದ ಡಿಸಿ, ಎಸ್‌ಪಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹಂಚಿಕೊಳ್ಳಿ: