ತುಮಕೂರು: ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಕೆ
ತುಮಕೂರು: ಉತ್ತರಾಖಂಡದಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ (Uttarakhand Helicopter Crash) ಮೃತಪಟ್ಟ ತುಮಕೂರು (Tumakuru) ಜಿಲ್ಲೆ ಕುಣಿಗಲ್ (Kunigal) ತಾಲೂಕಿನ ಹುಲಿಯೂರುದುರ್ಗ ಮೂಲದ ಶಂಕರೇಗೌಡ ಮತ್ತು ಹೆಚ...

ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ನಿವಾಸಿಗಳಾದ ಶಂಕರೇಗೌಡ ಮತ್ತು ಹೆಚ್.ಎಸ್.ನಟರಾಜು ಅವರ ಅಂತ್ಯಕ್ರಿಯೆ ಮಂಗಳವಾರ ಬೆಳಿಗ್ಗೆ ನಡೆಯಿತು. ಸೋಮವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದ ಮೃತದೇಹಗಳನ್ನು ಹುಲಿಯೂರುದುರ್ಗಕ್ಕೆ ಕರೆತರಲಾಗಿತ್ತು. ಬೆಳಿಗ್ಗೆ 10 ಗಂಟೆ ಸುಮಾರಿಗೆ ಒಕ್ಕಲಿಗ ಸಂಪ್ರದಾಯದ ಪ್ರಕಾರ ಇವರಿಬ್ಬರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಈ ವೇಳೆ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಹೆಲಿಕಾಪ್ಟರ್ ನಿರ್ವಹಣೆಯಲ್ಲಿನ ಲೋಪದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.




