ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಉಡುಪಿ ಅಂಬಾಗಿಲು ಪುತ್ತೂರು ದೇವಸ್ಥಾನದಲ್ಲಿ ವೈಭವದ ಶಾರದಾ ಮಹೋತ್ಸವ ಸಂಪನ್ನ

ನವರಾತ್ರಿ ಸಂಭ್ರಮದ – 34 ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಉಡುಪಿ ಅಂಬಾಗಿಲು ವೈಶ್ಯವಾಣಿ ಸಮಾಜದ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನ ಪುತ್ತೂರು ನವರಾತ್ರಿ ಸಂಭ್ರಮ ಹಾಗೂ 34ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಅದ್ದೂರಿಯಾಗ...

· ಉಡುಪಿ
ಉಡುಪಿ ಅಂಬಾಗಿಲು ವೈಶ್ಯವಾಣಿ ಸಮಾಜದ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಪುತ್ತೂರು.
ಹಂಚಿಕೊಳ್ಳಿ:

ಉಡುಪಿಯ ಅಂಬಾಗಿಲು ವೈಶ್ಯವಾಣಿ ಸಮಾಜದ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ 34ನೇ ವರ್ಷದ ಶಾರದಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ನವರಾತ್ರಿಯ ಸಂದರ್ಭದಲ್ಲಿ ನಡೆದ ಈ ಉತ್ಸವದಲ್ಲಿ ದೇವರಿಗೆ ವಿಶೇಷ ಅಲಂಕಾರ, ಭಜನೆ, ಚಂಡಿಕಾ ಯಾಗ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ತಂತ್ರಿಗಳಾದ ಶ್ರೀನಿವಾಸ ತಂತ್ರಿಗಳು ಮತ್ತು ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು. ಬುಧವಾರ ನಡೆದ ಶೋಭಾಯಾತ್ರೆಯ ನಂತರ ಶಾರದಾ ದೇವಿಯ ಮೂರ್ತಿಯನ್ನು ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಹಂಚಿಕೊಳ್ಳಿ: