ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಅ.17 ರಂದು ಬ್ರಹ್ಮಾವರದಲ್ಲಿ ಹಕ್ಕೊತ್ತಾಯ ಸಭೆ

ಉಡುಪಿ: ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಹೈಕೋರ್ಟ್ ಪೀಠವನ್ನು ಉಡುಪಿಯಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲೆ ಕರಾವಳಿ ಹೈಕೋರ್ಟ್... The post ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ:...

· ಉಡುಪಿ
ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17 ರಂದು ಬ್ರಹ್ಮಾವರದಲ್ಲಿ ಹಕ್ಕೊತ್ತಾಯ ಸಭೆ
ಹಂಚಿಕೊಳ್ಳಿ:

ಉಡುಪಿಯಲ್ಲಿ ಹೈಕೋರ್ಟ್ ಪೀಠವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯು ಅಕ್ಟೋಬರ್ 17ರಂದು ಬ್ರಹ್ಮಾವರದ ಬಂಟರ ಭವನದಲ್ಲಿ ಸಭೆಯನ್ನು ಆಯೋಜಿಸಿದೆ. ಈ ಕುರಿತು ಮಾಹಿತಿ ನೀಡಿದ ಸಮಿತಿಯ ಸಂಚಾಲಕ ಪ್ರೇಮ್ ಪ್ರಸಾದ್ ಶೆಟ್ಟಿ, ಕರಾವಳಿ ಭಾಗದ ಜನರಿಗೆ ಬೆಂಗಳೂರಿಗೆ ಪ್ರಯಾಣಿಸುವ ಕಷ್ಟ ತಪ್ಪಿಸಲು ಜಿಲ್ಲೆಯಲ್ಲಿ ಪೀಠ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಈ ಬೇಡಿಕೆಯನ್ನು ಪರಿಶೀಲಿಸಲು ಈಗಾಗಲೇ ಅನು ಶಿವರಾಮನ್, ಎಸ್.ಜಿ. ಪಂಡಿತ್ ಹಾಗೂ ಮೊಹಮ್ಮದ್ ನವಾಜ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿದ್ದು, ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಸಾರ್ವಜನಿಕರು ಹಾಗೂ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.

ಹಂಚಿಕೊಳ್ಳಿ: