ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಉಡುಪಿಯಲ್ಲಿ ನವೆಂಬರ್ 14ರಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ

ಜಿಲ್ಲೆಯ ಏಳು ಕಡೆ ವಿವಿಧ ಕಾರ್ಯಕ್ರಮ; ನ.20ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾರೋಪ ಉಡುಪಿ: 73ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು... The post ನ.14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 73ನೇ ಅಖಿಲ ಭಾರತ ಸಹ...

· ಉಡುಪಿ
ನ.14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 73ನೇ ಅಖಿಲ ಭಾರತ ಸಹಕಾರ ಸಪ್ತಾಹ- ಜಯಕರ್ ಶೆಟ್ಟಿ ಇಂದ್ರಾಳಿ
ಹಂಚಿಕೊಳ್ಳಿ:

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ನವೆಂಬರ್ 14ರಿಂದ 20ರವರೆಗೆ ಜಿಲ್ಲೆಯಾದ್ಯಂತ ಏಳು ದಿನಗಳ ಕಾಲ ಸಹಕಾರ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ಸಹಕಾರ ಕ್ಷೇತ್ರದ ಆಧುನೀಕರಣ, ಶಿಕ್ಷಣ, ಮಹಿಳೆಯರು ಹಾಗೂ ಯುವಜನರ ಪಾಲ್ಗೊಳ್ಳುವಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಂವಾದ ಮತ್ತು ಕಾರ್ಯಕ್ರಮಗಳು ನಡೆಯಲಿವೆ. ಸಂತೆಕಟ್ಟೆಯಲ್ಲಿ ಉದ್ಘಾಟನೆಗೊಳ್ಳುವ ಈ ಸಪ್ತಾಹವು ಕೋಟೇಶ್ವರ, ಕೋಟ, ಬಜಗೋಳಿ ಹಾಗೂ ಪಡುಬಿದ್ರಿಯಂತಹ ವಿವಿಧ ಸ್ಥಳಗಳಲ್ಲಿ ಮುಂದುವರಿಯಲಿದೆ. ನವೆಂಬರ್ 20ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾರೋಪ ಸಮಾರಂಭದೊಂದಿಗೆ ಈ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿವೆ ಎಂದು ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಹಂಚಿಕೊಳ್ಳಿ: