ಮುಖ್ಯ ವಿಷಯಕ್ಕೆ ಹೋಗಿ
The Karnataka Today
13 Oct
ಸುದ್ದಿ
ಸುದ್ದಿ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಸೈಂಟ್ ಆಗ್ನೆಸ್ ಕಾಲೇಜು – ಪದವಿ ಪರೀಕ್ಷೆ ಮುಂದೂಡಿಕೆ

– ದಸರಾ ರಜೆ ಹೊತ್ತಲ್ಲೇ ಪರೀಕ್ಷೆ ನಡೆಸಲು ಮುಂದಾಗಿದ್ದ ಕಾಲೇಜು ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆ...

· ದಕ್ಷಿಣ ಕನ್ನಡ
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಸೈಂಟ್ ಆಗ್ನೆಸ್ ಕಾಲೇಜು – ಪದವಿ ಪರೀಕ್ಷೆ ಮುಂದೂಡಿಕೆ
ಹಂಚಿಕೊಳ್ಳಿ:

– ದಸರಾ ರಜೆ ಹೊತ್ತಲ್ಲೇ ಪರೀಕ್ಷೆ ನಡೆಸಲು ಮುಂದಾಗಿದ್ದ ಕಾಲೇಜು

ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ನಗರದ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜು ಕೊನೆಗೂ ಮಣಿದಿದೆ. ಪರೀಕ್ಷೆಯನ್ನು ಮುಂದೂಡಲು ಕಾಲೇಜು ತೀರ್ಮಾನಿಸಿದೆ.

ಮಂಗಳೂರಿನ (Mangaluru) ಬೆಂದೂರ್‌ವೆಲ್ ಬಳಿಯಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿತ್ತು.

ಮಂಗಳೂರು ದಸರಾ ಕರಾವಳಿಯ ಪ್ರಮುಖ ಹಬ್ಬವಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಆದರೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನೇ ನೀಡದೆ ಪರೀಕ್ಷೆ ನಡೆಸಲು ಮುಂದಾಗಿದ್ದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಕಾಲೇಜಿನ ನಡೆಯನ್ನು ಖಂಡಿಸಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸಾಥ್ ನೀಡಿತ್ತು.

ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಮಾಧ್ಯಮಗಳಿಗೆ ಕಾಲೇಜಿನ ಪರೀಕ್ಷಾ ಅಧಿಕಾರಿ ಶುಭಾರೇಖಾ ಪ್ರತಿಕ್ರಿಯಿಸಿ, ಈ ಕಾಲೇಜಿಗೆ ನೂರು ವರ್ಷಗಳ ಇತಿಹಾಸವಿದೆ. ಪ್ರತಿವರ್ಷ ಅಕ್ಟೋಬರ್‌ನಲ್ಲೇ ಪರೀಕ್ಷೆ ಇದೆ. ಈ ವರ್ಷವೂ ತಿಂಗಳ ಮುಂಚೆಯೇ ಪರೀಕ್ಷೆ ಇರುವ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಏಕಾಏಕಿ ಪರೀಕ್ಷೆಗೆ ವಿರೋಧಿಸಿ ಪ್ರತಿಭಟನೆ ಮಾಡಿದ್ದಾರೆ. ಅಕ್ಟೋಬರ್ 19 ಮತ್ತು 22ರಂದು ಪರೀಕ್ಷೆ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ಆ ದಿನದ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಿದ್ದೇವೆ. ಈಗಾಗಲೇ ಅಂತಿಮ ಪದವಿ ವಿದ್ಯಾರ್ಥಿಗಳು ಮುಂದಿನ ಉದ್ಯೋಗಕ್ಕೆ ಹೋಗಲು ತಯಾರಿ ಮಾಡಿದ್ದಾರೆ ಎಂದು ತಿಳಿಸಿದರು.

ಹಂಚಿಕೊಳ್ಳಿ: