ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬಂದ ಏರ್ ಇಂಡಿಯಾ ವಿಮಾನಕ್ಕೆ ಅಪ್ಪಳಿಸಿದ ಹಕ್ಕಿ

ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿದ್ದ 148 ಪ್ರಯಾಣಿಕರು ಕ್ಷಣಕಾಲ ಆತಂಕಕ್ಕೊಳಗಾದರೂ, ಸಿಬ್ಬಂದಿ ಕೆಂಪೇಗೌಡ ವಿಮಾನ ನಿಲ್ದಾಣದ...

Flight: ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಪಕ್ಷಿ ಡಿಕ್ಕಿ! 148 ಪ್ರಯಾಣಿಕರ ಸ್ಥಿತಿ ಏನಾಯ್ತು?
ಹಂಚಿಕೊಳ್ಳಿ:

ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಐಎಕ್ಷ್‌2065 ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿದ್ದ 148 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಯಶಸ್ವಿಯಾಗಿ ಇಳಿಸಲಾಗಿದೆ. ವಿಮಾನ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ ನಂತರ ತಾಂತ್ರಿಕ ತಂಡಗಳು ಎಂಜಿನ್ ಮತ್ತು ವಿಮಾನದ ರಚನೆಯನ್ನು ಪರಿಶೀಲನೆಗೆ ಒಳಪಡಿಸಿವೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಹಂಚಿಕೊಳ್ಳಿ: