ಬೆಂಗಳೂರಿನಲ್ಲಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಮತ್ತು ಶಾಂತಿನಗರದಲ್ಲಿ ಟೀ ಬೆಲೆ ಏರಿಕೆ
Breaking News Today Live Updates: ಸ್ಟಿಂಗ್ ಕಾರ್ಯಾಚರಣೆ ಆರೋಪಕ್ಕೆ ಸವಾಲೆಸೆದಿರುವ ಹೆಚ್.ಡಿ. ಕುಮಾರಸ್ವಾಮಿ ಇಂದು ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಮುಖ ದಾಖಲೆ ಬಿಡುಗಡೆ ಮಾಡಲಿದ್ದಾರೆ. ಇನ್ನೊಂದೆಡೆ ಹ...

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೇಳಿಕೆಯನ್ನು ಟೀಕಿಸಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದೇ ವೇಳೆ ಶಾಂತಿನಗರದ ಉಡುಪಿ ಗ್ರ್ಯಾಂಡ್ ವೆಜ್ ಹೋಟೆಲ್‌ನಲ್ಲಿ ಟೀ ಮತ್ತು ಕಾಫಿಯ ದರವನ್ನು 5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಇತ್ತ ಬಂಗಾಳಕೊಲ್ಲಿಯಲ್ಲಿ ಮುರಾಸು ಚಂಡಮಾರುತವು ತೀವ್ರಗೊಂಡಿದ್ದು, ನೆಲ್ಲೂರು ಮತ್ತು ನರಸಾಪುರ ನಡುವೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಹಲವು ಕಡೆ ಶಾಲೆಗಳಿಗೆ ರಜೆ ನೀಡಲಾಗಿದೆ.




